ಚಾಮರಾಜನಗರ: ಕರ್ತವ್ಯ ಲೋಪದ ಹಿನ್ನೆಲೆ ಗುಂಡ್ಲುಪೇಟೆ ತಾಲೂಕಿನ ಬನ್ನಿತಾಳಪುರ ಗ್ರಾಮ ಪಂಚಾಯಿತಿಯ ಪಿಡಿಒ ಎನ್.ಗೋವಿಂದಪ್ಪ ಅಮಾನತು.
ಅಮಾನತು ಮಾಡಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ.ಗಾಯತ್ರಿ ಆದೇಶ ಹೊರಡಿಸಿದ್ದಾರೆ.
ಮೂಲ ಕುರಟ್ಟಿ ಹೊಸೂರಿನ ಗ್ರಾಮ ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿಯಾಗಿದ್ದು, ಬನ್ನಿತಾಳಪುರ ಗ್ರಾಮ ಪಂಚಾಯಿತಿಗೆ ನಿಯೋಜನೆಯಾಗಿದ್ದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಎನ್.ಗೋವಿಂದಪ್ಪ.
ಕರ್ತವ್ಯಕ್ಕೆ ಗೈರು ಹಾಜರಾಗುತ್ತಿದ್ದು, ಕಚೇರಿಯ ಕೆಲಸಗಳನ್ನು ನಿರ್ವಹಿಸದೇ ಇರುವ ಬಗ್ಗೆ ದೂರು ಬಂದಿತ್ತು. ಈ ಹಿನ್ನೆಲೆ ನೋಟಿಸ್ ನೀಡಿದ್ದರೂ ಯಾವುದೇ ಸಮಜಾಯಿಷಿ ನೀಡಿರಲಿಲ್ಲ.
ಕರ್ತವ್ಯ ಲೋಪ ಹಿನ್ನೆಲೆ ಎನ್.ಗೋವಿಂದಪ್ಪ. ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.
إرسال تعليق