ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 3 ತಿಂಗಳೊಳಗೆ ನೋಂದಾಯಿತ ಎಲ್ಲರಿಗೂ ಆಯುಷ್ಮಾನ್ ಕಾರ್ಡ್ ವಿತರಣೆ- ಡಾ.ಕೆ ಸುಧಾಕರ್

3 ತಿಂಗಳೊಳಗೆ ನೋಂದಾಯಿತ ಎಲ್ಲರಿಗೂ ಆಯುಷ್ಮಾನ್ ಕಾರ್ಡ್ ವಿತರಣೆ- ಡಾ.ಕೆ ಸುಧಾಕರ್

 


ಬೆಂಗಳೂರು: ಮುಂದಿನ ಮೂರು ತಿಂಗಳೊಳಗೆ ನೋಂದಾಯಿತ ಎಲ್ಲರಿಗೂ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಕಾರ್ಡ್ ವಿತರಿಸುವುದಾಗಿ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ.


ವಿಧಾನ ಪರಿಷತ್ ನಲ್ಲಿ ಕೆ. ಹರೀಶ್ ಕುಮಾರ್, ಯು.ಬಿ.ವೆಂಕಟೇಶ್ ಅವರು ಪ್ರತ್ಯೇಕವಾಗಿ ಕೇಳಿದ ಪ್ರಶ್ನೆಗೆ ಉತ್ತರ ನೀಡಿದ ಸಚಿವರು, ಕಳೆದ ಮೂರು ವರ್ಷಗಳಲ್ಲಿ ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ ಯೋಜನೆಯಡಿ 39.48 ಕೋಟಿ ಜನರಿಗೆ ಚಿಕಿತ್ಸೆ ನೀಡಲಾಗಿದೆ. 3000 ಕೋಟಿ ರೂಪಾಯಿ ವೆಚ್ಚ ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.


ತುರ್ತು ಸಂದರ್ಭದಲ್ಲಿ ರಾಜ್ಯದ ಸಾರ್ವಜನಿಕ ಆಸ್ಪತ್ರೆಗಳಲ್ಲಿ ಯಾವುದೇ ದಾಖಲೆ ಇಲ್ಲದೆ ಇದ್ದರೂ ಚಿಕಿತ್ಸೆ ನೀಡಬೇಕು. ಈ ಸಂಬಂಧ ವೈದ್ಯರು, ಅರೆ ವೈದ್ಯಕೀಯ ಸಿಬ್ಬಂದಿ ಮತ್ತು ಇತರೆ ಸಿಬ್ಬಂದಿ ಅನುಸರಿಸಬೇಕಾದ ಕ್ರಮಗಳ ಬಗ್ಗೆ ಸೂಚನೆಯಲ್ಲಿ ತಿಳಿಸಲಾಗಿದೆ. ವೈದ್ಯರ ಶಿಫಾರಸು ಪತ್ರದೊಂದಿಗೆ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುತ್ತಿದ್ದು, ಈ ವ್ಯವಸ್ಥೆ ರದ್ದು ಮಾಡಲು ಸಾಧ್ಯವಿಲ್ಲ. 


ಶಿಫಾರಸು ಪತ್ರ ಇಲ್ಲದೆ ಚಿಕಿತ್ಸೆ ನೀಡಲು ಮುಂದಾದರೆ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಲು ಯಾರೂ ಬರಲ್ಲ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.

0 Comments

Post a Comment

Post a Comment (0)

Previous Post Next Post