ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಏ.1ರಿಂದ ಶಾಲಾ ವಿದ್ಯಾರ್ಥಿನಿಯರಿಗೆ ಉಚಿತ ಬಸ್ ಪಾಸ್ ವ್ಯವಸ್ಥೆ: ಸಿಎಂ ಬೊಮ್ಮಾಯಿ ಸೂಚನೆ

ಏ.1ರಿಂದ ಶಾಲಾ ವಿದ್ಯಾರ್ಥಿನಿಯರಿಗೆ ಉಚಿತ ಬಸ್ ಪಾಸ್ ವ್ಯವಸ್ಥೆ: ಸಿಎಂ ಬೊಮ್ಮಾಯಿ ಸೂಚನೆ

 


ಬೆಂಗಳೂರು: ಏಪ್ರಿಲ್ 1ರಿಂದ ದುಡಿಯುವ ಹೆಣ್ಣು ಮಕ್ಕಳಿಗೆ ಹಾಗೂ ಶಾಲಾ ವಿದ್ಯಾರ್ಥಿನಿಯರಿಗೆ ಉಚಿತ ಬಸ್ ಪಾಸ್ ವ್ಯವಸ್ಥೆ ಕಲ್ಪಿಸಲು ಎಲ್ಲ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದರು.


ಅವರು ಇಂದು ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ವೋಲ್ವೋ ಮಲ್ಟಿ ಆಕ್ಸೆಲ್ ಬಿಎಸ್ 4 -9600 ಸ್ಲೀಪರ್ ಬಸ್ಸುಗಳನ್ನು ಲೋಕಾರ್ಪಣೆ ಮಾಡಿ ಮಾತನಾಡಿದರು.


ಮಹಿಳೆಯರಿಗೆ ಗೌರವದ ಜೊತೆಗೆ ಆರ್ಥಿಕವಾಗಿ ಸ್ವಾವಲಂಬಿಯಾಗಲು ಈ ಯೋಜನೆ ರೂಪಿಸಲಾಗಿದೆ. ಮಿನಿ ಸ್ಕೂಲ್ ಬಸ್ ಗಳನ್ನು ಪರಿಚಯಿಸಬೇಕು. ಇರುವ ಬಸ್ ಗಳ ಸಂಚಾರ ಆರಂಭ ಮಾಡಬೇಕು. ಶಾಲೆ ಆರಂಭವಾಗುವ ಸಂದರ್ಭದಲ್ಲಿ ಪ್ರತಿ ತಾಲೂಕಿನಲ್ಲಿ ಕನಿಷ್ಟ ಐದು ಬಸ್ ಸಂಚಾರ ಆರಂಭ ಮಾಡಬೇಕು. ಅಗತ್ಯ ಬಿದ್ದರೆ ಇನ್ನಷ್ಟು ಅನುದಾನ ನೀಡಲಾಗುವುದು ಎಂದರು.


ಆರ್ಥಿಕ ಬೆಳವಣಿಗೆಯಲ್ಲಿ ಸಂಚಾರ ಪ್ರಮುಖ ಪಾತ್ರ ವಹಿಸುತ್ತದೆ. ಅದಕ್ಕೆ ಸರ್ಕಾರ ಆದ್ಯತೆ ನೀಡಿದೆ. ಈ ಬಾರಿಯ ಬಜೆಟ್ ನಲ್ಲಿ ವಿದ್ಯಾರ್ಥಿನಿಯರಿಗೆ ಹಾಗೂ ದುಡಿಯುವ ಹೆಣ್ಣುಮಕ್ಕಳಿಗೆ ಉಚಿತ ಪಾಸ್ ನೀಡುವುದಾಗಿ ಘೋಷಣೆ ಮಾಡಿದ್ದು, ಸರ್ಕಾರ ನೌಕರ ವರ್ಗ ಹಾಗೂ ಆಡಳಿತ ಮಂಡಳಿ ಜೊತೆಗಿರುತ್ತದೆ. ಜನರಿಗೆ ಉತ್ತಮ ಸೇವೆ ಒದಗಿಸೋಣ ಎಂದರು.

ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter


0 Comments

Post a Comment

Post a Comment (0)

Previous Post Next Post