ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಎಕ್ಕೂರು: ನಂದಾದೀಪ ಮಹಿಳಾ ಮಂಡಲದ ನೂತನ ಕಟ್ಟಡಕ್ಕೆ ಶಾಸಕ ಕಾಮತ್‌ ಶಿಲಾನ್ಯಾಸ

ಎಕ್ಕೂರು: ನಂದಾದೀಪ ಮಹಿಳಾ ಮಂಡಲದ ನೂತನ ಕಟ್ಟಡಕ್ಕೆ ಶಾಸಕ ಕಾಮತ್‌ ಶಿಲಾನ್ಯಾಸ


ಮಂಗಳೂರು: ಎಕ್ಕೂರಿನ ಶ್ರೀ ನಂದಾದೀಪ ಮಹಿಳಾ ಮಂಡಲದ ನೂತನ ಕಟ್ಟಡದ ಕಾಮಗಾರಿಗೆ ಇಂದು ಶಿಲಾನ್ಯಾಸವನ್ನು ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ಡಿ. ವೇದವ್ಯಾಸ ಕಾಮತ್‌ ಅವರು ನೆರವೇರಿಸಿದರು.


ಈ ಸಂದರ್ಭದಲ್ಲಿ ಮಾತನಾಡಿದ ಮಂಗಳೂರು ಮಹಾನಗರಪಾಲಿಕೆ ಮೇಯರ್‍‌ ಜಯಾನಂದ ಅಂಚನ್ ಅವರು, ನಗರದ ಅಭಿವೃದ್ಧಿ ಕಾರ್ಯದಲ್ಲಿ ಶಾಸಕ ವೇದವ್ಯಾಸ ಕಾಮತ್ ಅವರ ಬೆಂಬಲ, ಸಹಕಾರ ಅತ್ಯಂತ ಮಹತ್ವದ್ದಾಗಿದೆ. ಪಾಲಿಕೆಯ ಎಲ್ಲ ಅಭಿವೃದ್ಧಿ ಯೋಜನೆಗಳಿಗೂ ಶಾಸಕರು ಸಕ್ರಿಯವಾಗಿ ಬೆಂಬಲ ನೀಡುತ್ತಿದ್ದು, ಸರಕಾರದಿಂದ ವಿವಿಧ ಇಲಾಖೆಗಳ ಮೂಲಕ ಅನುದಾನ ಕೊಡಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.


ಮೇಯರ್ ಜಯಾನಂದ ಅಂಚನ್, ಸ್ಥಾಯಿ ಸಮಿತಿಯ ಅಧ್ಯಕ್ಷರಾದ ಕಿಶೋರ್ ಕೊಟ್ಟಾರಿ, ಶಕೀಲಾ ಕಾವ, ಕಾರ್ಪೋರೇಟರ್ ಪ್ರವೀಣ್ ಚಂದ್ರ ಆಳ್ವ, ಪಾಲಿಕೆ ನಾಮನಿರ್ದೇಶಿತ ಸದಸ್ಯರಾದ ಭಾಸ್ಕರ್ ಚಂದ್ರ ಶೆಟ್ಟಿ, ನಂದಾದೀಪ ಮಹಿಳಾ ಮಂಡಳಿಯ ಅಧ್ಯಕ್ಷರಾದ ತೇಜಸ್ವಿನಿ , ಮುಖಂಡರಾದ ಕಿರಣ್ ರೈ, ಯಶೋಧರ ಚೌಟ, ಮನೋಹರ್.ಕೆ, ಜಯ ಶೆಟ್ಟಿ, ವಿಜಯನ್,  ರೇಖಾ ಶೆಟ್ಟಿ, ಸುಜಾತ ಕೊಟ್ಟಾರಿ, ಸುಕೇಶ್,  ಪ್ರವೀಣ್ ಎಕ್ಕೂರು, ರವಿ ಎಕ್ಕೂರು, ಸುನಿತಾ ಶೆಟ್ಟಿ, ಹೇಮಲತಾ, ಚಿತ್ರ ಮುಂತಾದವರು ಉಪಸ್ಥಿತರಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

0 تعليقات

إرسال تعليق

Post a Comment (0)

أحدث أقدم