ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಮಂಗಳೂರು; ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದರೋಡೆಕೋರರು, ಹತ್ಯೆಗೀಡಾದ ಸಿಬ್ಬಂದಿ

ಮಂಗಳೂರು; ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದರೋಡೆಕೋರರು, ಹತ್ಯೆಗೀಡಾದ ಸಿಬ್ಬಂದಿ

 


ಮಂಗಳೂರಿನ ಹಂಪನಕಟ್ಟೆ ಮಿಲಾಗ್ರಿಸ್ ಸಮೀಪ ಜ್ಯುವೆಲ್ಲರಿ ಅಂಗಡಿಯಲ್ಲಿ ಕೆಲಸದ ಸಿಬ್ಬಂದಿಯನ್ನು ಬರ್ಬರವಾಗಿ ಹತ್ಯೆಗೈದ ಘಟನೆ ನಡೆದಿದೆ.

ಅತ್ತಾವರ ನಿವಾಸಿ ರಾಘವ (50) ಹತ್ಯೆಗೀಡಾದವರು.

ಅಂಗಡಿಯಲ್ಲಿ ಒಬ್ಬರೇ ಇದ್ದ ಸಮಯದಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದ್ದು, ದರೋಡೆಯೆ ಅಥವಾ ಬೇರೆ ಕಾರಣವೇ ತಿಳಿದು ಬಂದಿಲ್ಲ.‌ ಅಂಗಡಿ ಮಾಲಕರು ಊಟ ಮಾಡಿ ಬಂದಾಗ ಘಟನೆ ಗಮನಕ್ಕೆ ಬಂದಿದ್ದು, ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಸ್ಥಳಕ್ಕೆ ಡಿಸಿಪಿ ಅಂಶುಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

0 Comments

Post a Comment

Post a Comment (0)

Previous Post Next Post