ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಮಂಗಳೂರು ಮೂಲದ ಖ್ಯಾತ ಪತ್ರಕರ್ತ, ಲೇಖಕ ರೌಫ್ ಅಹ್ಮದ್ ನಿಧನ

ಮಂಗಳೂರು ಮೂಲದ ಖ್ಯಾತ ಪತ್ರಕರ್ತ, ಲೇಖಕ ರೌಫ್ ಅಹ್ಮದ್ ನಿಧನ

 


ಮುಂಬೈ: ಚಲನಚಿತ್ರ ಪತ್ರಿಕೋದ್ಯಮದಲ್ಲಿ ವಿಶಿಷ್ಟ ಛಾಪು ಮೂಡಿಸಿ ಆ ಕ್ಷೇತ್ರದಲ್ಲಿ ಹಲವು ಹೊಸ ಪ್ರಯೋಗಗಳನ್ನು ಯಶಸ್ವಿಯಾಗಿ ಜಾರಿಗೆ ತಂದ ಮಂಗಳೂರು ಮೂಲದ ಖ್ಯಾತ ಪತ್ರಕರ್ತ, ಲೇಖಕ ರೌಫ್ ಅಹ್ಮದ್ ಮುಂಬೈನಲ್ಲಿ ಇತ್ತೀಚಿಗೆ ನಿಧನರಾಗಿದ್ದಾರೆ. 


70ರ ದಶಕದ ಮಧ್ಯಭಾಗದಿಂದ ಅವರು ಸಂಪಾದಕರಾಗಿದ್ದ ನಿಯತಕಾಲಿಕೆಗಳ ಮೂಲಕ ಚಲನಚಿತ್ರ ಪತ್ರಿಕೋದ್ಯಮಕ್ಕೆ ಹೊಸ ದಿಕ್ಕು ತೋರಿಸಿದ ಕೀರ್ತಿ ರೌಫ್ ಅಹ್ಮದ್ ಅವರದ್ದು.


ಅವರು ರವಿವಾರ ಬೆಳಿಗ್ಗೆ ಅಲ್ಪಕಾಲದ ಅನಾರೋಗ್ಯದಿಂದ ಅವರ ವರ್ಸೋವಾ ನಿವಾಸದಲ್ಲಿ ನಿಧನರಾದರು. 


ಮೃತರು ಪತ್ನಿ, ಪುತ್ರ, ಪುತ್ರಿ, ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.


0 Comments

Post a Comment

Post a Comment (0)

Previous Post Next Post