ಬೆಂಗಳೂರು : ಇಂದಿನಿಂದ ಎರಡು ದಿನಗಳ ಕಾಲ ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮೈಸೂರು, ಮಂಡ್ಯ, ಚಿತ್ರದುರ್ಗ, ತುಮಕೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ಬೆಂಗಳೂರಿನ ಕನಿಷ್ಠ ತಾಪಮಾನವು 17 ಡಿಗ್ರಿ ಸೆಲ್ಸಿಯಸ್ ಇರಲಿದೆ. ಅಲ್ಲದೆ, ಕರ್ನಾಟಕದ ದಕ್ಷಿಣ ಒಳನಾಡಿನ ಪ್ರದೇಶಗಳಲ್ಲಿ ಸ್ವಲ್ಪ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಫೆಬ್ರವರಿ 1 ರಂದು ಸಾಧಾರಣ ಮಳೆಯಾಗಲಿದೆ. ಕನಿಷ್ಠ ಉಷ್ಣಾಂಶವು ದಕ್ಷಿಣ ಒಳನಾಡಿನ ಸಾಮಾನ್ಯಕ್ಕಿಂತ 2 ರಿಂದ 3 ಡಿಗ್ರಿ ಸೆಲ್ಸಿಯಸ್ ಕಡಿಮೆಯಾಗುವ ಸಾಧ್ಯತೆ ಇದೆ.
ವಿಜಯನಗರ ಜಿಲ್ಲೆಯ ಮೇಲೆ ಅತಿ ಕಡಿಮೆ ಮಳೆಯಾಗುವ ಸಾಧ್ಯತೆಯಿದ್ದು, ಉಳಿದ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರೆಯಲಿದೆ. ದೆಹಲಿಯಲ್ಲಿ 17.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಹಿಮಾಚಲ ಪ್ರದೇಶದಲ್ಲಿ ಹಿಮಪಾತ ಉಂಟಾಗಲಿದ್ದು, ಉತ್ತರಾಖಂಡದಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇಂದು ದೆಹಲಿಯಲ್ಲಿ ಕೂಡ ಸಾಧಾರಣ ಮಳೆಯಾಗಿದ್ದು, ಇಂದು ರಾಷ್ಟ್ರ ರಾಜಧಾನಿಯಲ್ಲಿ 20 ಮಿಮೀ ಮಳೆ ದಾಖಲಾಗಿದೆ.
ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಹವಾಮಾನ ವರದಿಯ ಪ್ರಕಾರ, ಬೆಂಗಳೂರಿನ ಕನಿಷ್ಠ ತಾಪಮಾನವು 17 ಡಿಗ್ರಿ ಸೆಲ್ಸಿಯಸ್ ಇರಲಿದೆ. ಅಲ್ಲದೆ, ಕರ್ನಾಟಕದ ದಕ್ಷಿಣ ಒಳನಾಡಿನ ಪ್ರದೇಶಗಳಲ್ಲಿ ಸ್ವಲ್ಪ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
Post a Comment