ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಹಿರಿಯ ಪತ್ರಕರ್ತ ಡಾ. ಎಸ್. ಆರ್. ರಾಮಸ್ವಾಮಿ ಅವರಿಗೆ ಪಂಪ ಸೇವಾ ಪ್ರಶಸ್ತಿ

ಹಿರಿಯ ಪತ್ರಕರ್ತ ಡಾ. ಎಸ್. ಆರ್. ರಾಮಸ್ವಾಮಿ ಅವರಿಗೆ ಪಂಪ ಸೇವಾ ಪ್ರಶಸ್ತಿ

 


ಈ ಬಾರಿ ಪ್ರತಿಷ್ಟಿತ ಪಂಪಾ ಸೇವಾ ಪ್ರಶಸ್ತಿ ಹಿರಿಯ ಪತ್ರಕರ್ತ ಡಾ. ಎಸ್. ಆರ್. ರಾಮಸ್ವಾಮಿ ಅವರಿಗೆ ಸಂದಿದೆ. ಪ್ರತಿ ವರ್ಷವೂ ರಾಜ್ಯ ಸರ್ಕಾರ ಸಾಹಿತ್ಯ ಕ್ಷೇತ್ರದಲ್ಲಿ ಸುದೀರ್ಘ ಸೇವೆ ಸಲ್ಲಿಸಿದ ಶ್ರೇಷ್ಠರಿಗೆ ಪಂಪ ಪ್ರಶಸ್ತಿ ನೀಡುತ್ತಿದೆ.


ವಿಚಾರವಾದಿಯಾಗಿರುವ ರಾಮಸ್ವಾಮಿ ಅವರು ಕಳೆದ ನಾಲ್ಕು ದಶಕಗಳಿಂದ ರಾಷ್ಟ್ರೋತ್ಥಾನ ಪರಿಷತ್ತು ಪ್ರಕಟಿಸುವ ಜನಪ್ರಿಯ ಉತ್ಥಾನದ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.


ಕನ್ನಡ ಹಾಗೂ ಇಂಗ್ಲಿಷ್‌ನಲ್ಲಿ ಸುಮಾರು 30ಕ್ಕೂ ಹೆಚ್ಚು ಪುಸ್ತಕಗಳನ್ನು ಬರೆದಿದ್ದು, ಸಾವಿರಕ್ಕೂ ಹೆಚ್ಚು ಲೇಖನಗಳನ್ನು ಬರೆದಿದ್ದಾರೆ. ಪ್ರಶಸ್ತಿಯ ಭಾಗವಾಗಿ ರಾಮಸ್ವಾಮಿ ಅವರಿಗೆ ಫಲಕ, ಶಾಲು, ಹಾರ ಹಾಗೂ ಐದು ಲಕ್ಷ ರೂಪಾಯಿ ದೊರೆಯಲಿದೆ.

0 تعليقات

إرسال تعليق

Post a Comment (0)

أحدث أقدم