ಪುತ್ತೂರು: ಕೀಟನಾಶಕ ಸೇವಿಸಿ ವ್ಯಕ್ತಿಯೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರ ಪುತ್ತೂರು ತಾಲೂಕಿನ ಪಡ್ನೂರು ಗ್ರಾಮದ ಸೇಡಿಯಾಪು ಎಂಬಲ್ಲಿ ನಡೆದಿದೆ.
ಇಲ್ಲಿನ ದಿ. ಈಶ್ವರ ಗೌಡ ಎಂಬವರ ಪುತ್ರ ಜತ್ತಪ್ಪ ಗೌಡ ( 68 ) ಆತ್ಮಹತ್ಯೆ ಮಾಡಿಕೊಂಡವರು.
ವಿಪರೀತದ ಕುಡಿತದ ಚಟ ಹೊಂದಿದ್ದ ಅವರು ಅನಾರೋಗ್ಯದಿಂದಲೂ ಬಳಲುತ್ತಿದ್ದರು. ಬುಧವಾರ ಮುಸ್ಸಂಜೆ ವೇಳೆಗೆ ಮನೆಯಲ್ಲಿ
ಕೀಟ ನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಇದರಿಂದಾಗಿ ತೀವ್ರ ಅಸ್ವಸ್ಥಗೊಂಡಿದ್ದ ಅವರನ್ನು ಪುತ್ತೂರಿನ ಖಾಸಗಿ ಕರೆತಂದು ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ಕರೆದೊಯ್ಯುವ ವೇಳೆಗೆ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಮೃತರು ಪತ್ನಿ, ಇಬ್ಬರು ಪುತ್ರಿಯರು ಹಾಗೂ ಓರ್ವ ಪುತ್ರನನ್ನು ಅಗಲಿದ್ದಾರೆ. ಮೃತರ ಪುತ್ರ ಮನೋಜ್ ನೀಡಿದ ದೂರಿನಂತೆ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Post a Comment