ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ರೋಟರಿ ಕ್ಲಬ್ ಸುಳ್ಯ ವತಿಯಿಂದ ಸಾಧಕರಿಗೆ ಸನ್ಮಾನ

ರೋಟರಿ ಕ್ಲಬ್ ಸುಳ್ಯ ವತಿಯಿಂದ ಸಾಧಕರಿಗೆ ಸನ್ಮಾನ


ಸುಳ್ಯ: ರೋಟರಿ ಜಿಲ್ಲಾ ಗವರ್ನರ್ ರೊ| ಪ್ರಕಾಶ್ ಕಾರಂತ್ ಅವರ ಸುಳ್ಯದ ಅಧಿಕೃತ ಭೇಟಿಯ ಸಂದರ್ಭದಲ್ಲಿ ಸುಳ್ಯದ ವಿವಿಧ ಕ್ಷೇತ್ರದ ಸಾಧಕರನ್ನು ಫೆಬ್ರವರಿ 1ರಂದು ಸುಳ್ಯದ ರೋಟರಿ ಸಮುದಾಯ ಭವನದಲ್ಲಿ ಸನ್ಮಾನಿಸಲಾಯಿತು. 


ತಾಲೂಕು ಪ್ರಾಥಮಿಕ ಆರೋಗ್ಯ ಕೇಂದ್ರ ಸುಳ್ಳ, ಇದರ ಕಣ್ಣಿನ ತಜ್ಞರಾದ ಡಾ| ಅರ್ಚನಾ ಜಿ.ಎಸ್.; ಗೃಹರಕ್ಷಕ ದಳ ಸುಳ್ಳದ ಗೃಹರಕ್ಷಕಿ ಶ್ರೀಮತಿ ಪುಷ್ಪಾವತಿ; ಮಂಡೆಕೋಲು ಗ್ರಾಮ ಪಂಚಾಯತ್ ಗ್ರಂಥಾಲಯ ಮೇಲ್ವಿಚಾರಕಿ, ಶ್ರೀಮತಿ ಸಾವಿತ್ರಿ ರಾಮ್; ದೈವ ನರ್ತಕರು ಹಾಗೂ ಕೂಳಲು ವಾದಕರಾದ ವಿಜಿತ್‌ಕುಮಾರ್ ಮೈತಡ್ಡ; ಕವಿ ಉದಯ ಭಾಸ್ಕರ್ ಸುಳ್ಯ; ಜಾರತಡ್ಕ ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ದೇವಕಿ; ಸುಳ್ಯ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಶ್ರೀಮತಿ ಪ್ರಮೀಳಾ ಟಿ. ಹಾಗೂ ರಿಕಾಲಿಂಗ್ ಅಮರ ಸುಳ್ಯ ಪುಸ್ತಕದ ಲೇಖಕರಾದ ಅನಿಂದಿತ್ ಗೌಡ ಕೊಚ್ಚಿ ಬಾರಿಕೆ, ಇವರುಗಳನ್ನು ಗಣ್ಯರ ಸಮ್ಮುಖದಲ್ಲಿ ಸನ್ಮಾನಿಸಲಾಯಿತು. 


ರೋಟರಿ ಕ್ಲಬ್ ಸುಳ್ಯದ ಅಧ್ಯಕ್ಷರಾದ ಶ್ರೀ ಚಂದ್ರಶೇಖರ ಪೇರಾಲು ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ರೋ| ಶಿವರಾಂ ಏನೆಕಲ್ಲು ಅಸಿಸ್ಟೆಂಟ್ ಗವರ್ನರ್ - ಜೋನ್ V, ರೋ| ಪ್ರೀತಮ್ ಡಿ.ಕೆ. ಜೋನಲ್ ಲೆಫ್ಟಿನೆಂಟ್ - ಜೋನ್ V  ಅವರು ಉಪಸ್ಥಿತರಿದ್ದರು.

ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter


0 تعليقات

إرسال تعليق

Post a Comment (0)

أحدث أقدم