ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಸಂಟ್ಯಾರು ಸಮೀಪ ಭೀಕರ ರಸ್ತೆ ಅಪಘಾತ; ಓರ್ವ ಸಾವು

ಸಂಟ್ಯಾರು ಸಮೀಪ ಭೀಕರ ರಸ್ತೆ ಅಪಘಾತ; ಓರ್ವ ಸಾವು

 


ಪುತ್ತೂರು: ತಾಲೂಕಿನ ಸಂಟ್ಯಾರು ಸಮೀಪ ಭೀಕರ ರಸ್ತೆ ಅಪಘಾತ ಸಂಭವಿಸಿ ಮೃತಪಟ್ಟ ಘಟನೆಯೊಂದು ಮಂಗಳವಾರ ರಾತ್ರಿ ನಡೆದಿದೆ.

ಸಂಟ್ಯಾರು-ಬೆಟ್ಟಂಪಾಡಿ ರಸ್ತೆಯ ಸಂಟ್ಯಾರು ಸಮೀಪದ ಬಳಕ್ಕ ಎಂಬಲ್ಲಿ ಕಾರು ಅಪಘಾತ ಸಂಭವಿಸಿದ್ದು, ಎರಡು ವಿದ್ಯುತ್ ಕಂಬಕ್ಕೆ ಕಾರು ಗುದ್ದಿ 50 ಅಡಿ ಆಳದ ತೋಟಕ್ಕೆ ಬಿದ್ದಿದೆ.

ನಿಡ್ಪಳ್ಳಿ ನಿವಾಸಿ ದಿ. ಶ್ರೀಧರ ಭಟ್ ಎಂಬವರ ಪುತ್ರ ಮುರಳಿ ಕೃಷ್ಣ ಭಟ್ (35) ಮೃತಪಟ್ಟವರು. ದಿಲೀಪ್ ಕುಮಾರ್ , ಶಶಿಕುಮಾರ್, ನವನೀತ್ ಹಾಗೂ ಮುರಳಿ ಮುಂಡೂರು ಗಾಯಾಳುಗಳು. ಮೃತ ಮುರಳಿ ಕೃಷ್ಣ ಭಟ್ ಅವರು ನಿಡ್ಪಳ್ಳಿ ಬಜರಂಗದಳದ ಮಾಜಿ ಸಂಚಾಲಕ ಹಾಗೂ ವಿಹಿಂಪ ಅಧ್ಯಕ್ಷರಾಗಿದ್ದರು.

KA21 P 5049 ನೋಂದಣಿಯ ಫೋರ್ಡ್ ಫಿಗೋ ಕಾರು ಬೆಟ್ಟಂಪಾಡಿ ಕಡೆ ಪ್ರಯಾಣಿಸುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ, ರಸ್ತೆ ಬದಿಯಲ್ಲಿದ್ದ ಎರಡು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ತೋಟಕ್ಕೆ ಬಿದ್ದಿದೆ. ಅಪಘಾತದಲ್ಲಿ ಮುರಳಿ ಕೃಷ್ಣ ಮೃತಪಟ್ಟಿದ್ದು, ಗಾಯಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಹಾಗೆಯೇ ಅಪಘಾತ ಸಂಭವಿಸಿದ ಕೂಡಲೇ ಒಬ್ಬ ಗಾಯಳು ತನ್ನ ಮನೆಗೆ ಹೋಗಿದ್ದಾನೆ ಎಂದು ತಿಳಿದುಬಂದಿದೆ. ಪುತ್ತೂರು ಡಿವೈಎಸ್ಪಿ ವೀರಯ್ಯ ಹೀರೆಮಠ್ ಅಪಘಾತದ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.

0 Comments

Post a Comment

Post a Comment (0)

Previous Post Next Post