ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಸಾಮಾಜಿಕ ಕಾರ್ಯಕರ್ತ ಸಾಯಿದತ್ತ ನಿಧನ

ಸಾಮಾಜಿಕ ಕಾರ್ಯಕರ್ತ ಸಾಯಿದತ್ತ ನಿಧನ

 


ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ ಖ್ಯಾತ ಸಾಮಾಜಿಕ ಕಾರ್ಯಕರ್ತ ಸಾಯಿದತ್ತ ಅವರು (ಫೆ.3) ರಂದು ತಡರಾತ್ರಿ ಕೊನೆಯುಸಿರೆಳೆದಿದ್ದಾರೆ.

ಅನಾರೋಗ್ಯ ಹಿನ್ನೆಲೆ ಸಾಯಿದತ್ತ ಅವರನ್ನು ಜೆ.ಪಿ. ನಗರದ ಸುಪ್ರ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಕಳೆದ ಮೂರು ದಿನಗಳಿಂದ ಆಸ್ಪತ್ರೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಶುಕ್ರವಾರ (ಫೆ.3) ತಡರಾತ್ರಿ ವಿಧಿವಶರಾಗಿದ್ದಾರೆ.

ಹಲವಾರು ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದ ಸಾಯಿದತ್ತ ಅವರು ಆರ್​​ಟಿಐ ಕಾರ್ಯಕರ್ತರು ಆಗಿದ್ದರು. ಜಾಹೀರಾತು ಮಾಫಿಯಾ ವಿರುದ್ಧ ಬಹು ದೊಡ್ಡ ಹೋರಾಟ ನಡೆಸುವ ಮೂಲಕ ಜನಮನ್ನಣೆ ಗಳಿಸಿದ್ದರು. ಅವರು ಶಾಸಕ ಗರುಡಾಚಾರ್​ ಅವರ ಆಪ್ತ ಸಹಾಯಕರಾಗಿದ್ದರು.

ದೇವೇಗೌಡ ಪೆಟ್ರೋಲ್​ ಬಂಕ್​ ಬಳಿ ಇರುವ ಅವರ ನಿವಾಸದಲ್ಲಿ ಪಾರ್ಥೀವ ಶರೀರವನ್ನು ಅಂತಿಮ ದರ್ಶನಕ್ಕೆ ಇಡಲಾಗಿದ್ದು, ಇಂದು ಮಧ್ಯಾಹ್ನ ಅಂತ್ಯಕ್ರಿಯೆ ನೆರವೇರಲಿದೆ.

0 Comments

Post a Comment

Post a Comment (0)

Previous Post Next Post