ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ವಿಟ್ಲ: ಶೈಕ್ಷಣಿಕ ಕಾರ್ಯಾಗಾರದಲ್ಲಿ ಇಸ್ಲಾಂ ಮತ ಪ್ರವಚನದ ಆರೋಪ, ದೂರು ದಾಖಲು

ವಿಟ್ಲ: ಶೈಕ್ಷಣಿಕ ಕಾರ್ಯಾಗಾರದಲ್ಲಿ ಇಸ್ಲಾಂ ಮತ ಪ್ರವಚನದ ಆರೋಪ, ದೂರು ದಾಖಲು


ವಿಟ್ಲ: ಶೈಕ್ಷಣಿಕ ಕಾರ್ಯಾಗಾರದಲ್ಲಿ ಇಸ್ಲಾಂ ಮತ ಪ್ರವಚನ ಮಾಡಲಾಗಿದೆ ಎಂದು ಆರೋಪಿಸಿ ಹಿಂದೂ ಸಂಘಟನೆಯೊಂದು ದೂರು ದಾಖಲಿಸಿದ ಘಟನೆ ವಿಟ್ಲದಲ್ಲಿ ನಡೆದಿದೆ.


ಇಲ್ಲಿನ ಅಡ್ಯನಡ್ಕದ ಸಭಾಭವನವೊಂದರಲ್ಲಿ ಸಂಘಟನೆಯೊಂದು ಆ ಶೈಕ್ಷಣಿಕ ಕಾರ್ಯಾಗಾರ ಆಯೋಜಿಸಿತ್ತು. ಅದರಲ್ಲಿ ಇಸ್ಲಾಂ ಮತ ಪ್ರವಚನ ಮಾಡಿದ್ದಾರೆ ಎಂದು ಹಿಂದೂ ಸಂಘಟನೆ ಆರೋಪಿಸಿದ್ದು, ಹಿಂದೂ ವಿದ್ಯಾರ್ಥಿಗಳನ್ನು ಹೊರಕ್ಕೆ ಕಳುಹಿಸಿದ ಘಟನೆ ನಡೆದಿದೆ.


ಶೈಕ್ಷಣಿಕ ಕಾರ್ಯಾಗಾರದಲ್ಲಿ ಮತಪ್ರವಚನ ಮಾಡುತ್ತಿದ್ದಾರೆ ಎಂದು ಭಾಗವಹಿಸಿದ್ದ ಕೆಲವು ವಿದ್ಯಾರ್ಥಿಗಳು ಹಿಂದೂ ಸಂಘಟನೆಗೆ ತಿಳಿಸಿದ್ದರು. ಹಿಂದೂ ಸಂಘಟನೆ ಸ್ಥಳಕ್ಕೆ ತೆರಳಿ, ವಿದ್ಯಾರ್ಥಿಗಳನ್ನು ಹೊರಕ್ಕೆ ಕಳುಹಿಸಿ ಆಕ್ರೋಶ ವ್ಯಕ್ತಪಡಿಸಿ ಪ್ರಕರಣದ ವಿರುದ್ಧ ವಿಟ್ಲ ಠಾಣೆಗೆ ದೂರು ನೀಡಿದೆ. ಮತ ಪ್ರವಚನ ನಡೆಸಿದೆ ಎನ್ನಲಾದ ಸಂಘಟನೆಯ ವಿರುದ್ಧ ಕೋಮು ಪ್ರಚೋದನೆ ಯತ್ನ ಪ್ರಕರಣ ದಾಖಲಾಗಿದೆ.


0 تعليقات

إرسال تعليق

Post a Comment (0)

أحدث أقدم