ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಪ್ರಾಯೋಗಿಕ ಪರೀಕ್ಷೆಗೆ ಗೈರು ಹಾಜರಾದ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆಗಳಿಗೆ ಅವಕಾಶ

ಪ್ರಾಯೋಗಿಕ ಪರೀಕ್ಷೆಗೆ ಗೈರು ಹಾಜರಾದ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆಗಳಿಗೆ ಅವಕಾಶ

 


ಬೆಂಗಳೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸಿಹಿ ಸುದ್ದಿ ನೀಡಿದ್ದು, ಪ್ರಾಯೋಗಿಕ ಪರೀಕ್ಷೆಗೆ ಗೈರು ಹಾಜರಾದ ವಿದ್ಯಾರ್ಥಿಗಳಿಗೆ ಫೆ.20ರಿಂದ ಫೆ.28ರವರೆಗೆ ಪೂರಕ ಪ್ರಯೋಗಿಕ ಪರೀಕ್ಷೆಗಳಿಗೆ ಹಾಜರಾಗಲು ಅವಕಾಶ ನೀಡಿದೆ.



ಈ ಬಗ್ಗೆ ಅಧಿಕೃತ ಆದೇಶ ಹೊರಡಿಸಿದ ರಾಜ್ಯ ಸರ್ಕಾರ, 'ಫೆಬ್ರವರಿ 2023ರಲ್ಲಿ ನಡೆಯುತ್ತಿರುವ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ನೈಜ ಕಾರಣಗಳಿಂದ ಗೈರು ಹಾಜರಾದ ವಿದ್ಯಾರ್ಥಿಗಳಿಗೆ ದಿನಾಂಕ 20-02-2023ರಿಂದ ದಿನಾಂಕ 28.2.2023ರವರೆಗೆ ಪೂರಕ ಪ್ರಯೋಗಿಕ ಪರೀಕ್ಷೆಗಳಿಗೆ ಹಾಜರಾಗಲು ಅವಕಾಶ ಕಲ್ಪಿಸಲಾಗಿದೆ' ಎಂದಿದೆ.

0 تعليقات

إرسال تعليق

Post a Comment (0)

أحدث أقدم