ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ವಿಜಯರಾಘವ ಪಡ್ವೆಟ್ನಾಯರಿಗೆ ಶ್ರದ್ಧಾಂಜಲಿ

ವಿಜಯರಾಘವ ಪಡ್ವೆಟ್ನಾಯರಿಗೆ ಶ್ರದ್ಧಾಂಜಲಿ


ಉಜಿರೆ: ಸಾಮಾಜಿಕ, ಧಾರ್ಮಿಕ, ಸಾಂಸ್ಕೃತಿಕ ಇತ್ಯಾದಿಯಾಗಿ ಬಹುಮುಖಿ ಸಾತ್ವಿಕ ವ್ಯಕ್ತಿತ್ವ ವಿಜಯರಾಘವ ಪಡ್ವೆಟ್ನಾಯರದ್ದು. ಇವರು ಸಮಾಜದೊಂದಿಗೆ ಸದ್ಭಾವನೆ ಬೆಳೆಸಿಕೊಂಡ ಅಪೂರ್ವ ವ್ಯಕ್ತಿಯಾಗಿದ್ದರು. ಇವರ ಆದರ್ಶ ಅನುಕರಣೀಯ ಎಂದು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಪ್ರೊ. ದಿನೇಶ ಚೌಟ ಹೇಳಿದರು.


ಇವರು ಉಜಿರೆಯ ಶ್ರೀ ಜನಾರ್ದನ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಹಾಗೂ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಯ ಸದಸ್ಯರಾದ ವಿಜಯರಾಘವ ಪಡ್ವೆಟ್ನಾಯ ಇವರು ನಿಧನರಾದ ಪ್ರಯುಕ್ತ ಕಾಲೇಜಿನಲ್ಲಿ ನಡೆದ ಶ್ರದ್ಧಾಂಜಲಿ ಸಭೆಯಲ್ಲಿ ಮಾತನಾಡಿದರು.


ಎಲ್ಲಾ ವಿಭಾಗಗಳ ಮುಖ್ಯಸ್ಥರು, ಉಪನ್ಯಾಸಕರು ಹಾಗೂ ಉಪನ್ಯಾಸಕೇತರರು ಪಡ್ವೆಟ್ನಾಯರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವುದರ ಮೂಲಕ ಶ್ರದ್ಧಾಂಜಲಿ ಅರ್ಪಿಸಿದರು. 


ಸಂಸ್ಕೃತ ಭಾಷಾ ವಿಭಾಗದ ಮುಖ್ಯಸ್ಥರಾದ ಡಾ.ಪ್ರಸನ್ನಕುಮಾರ ಐತಾಳ್ ಪಡ್ವೆಟ್ನಾಯರ ಜೀವನದ ಕೆಲವು ಮಜಲುಗಳನ್ನು ಹಾಗೂ ಅವರ ಬದುಕಿನ ಕಿರು ಚಿತ್ರಣ ನೀಡಿ, ನಿರೂಪಿಸಿ ವಂದಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter


0 تعليقات

إرسال تعليق

Post a Comment (0)

أحدث أقدم