ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಮಂಗಳೂರು: ಕದ್ರಿ ಉತ್ತರ ವಾರ್ಡಿನ ಬಿಜೆಪಿ ಕಾರ್ಯಕರ್ತರ ಸಭೆ

ಮಂಗಳೂರು: ಕದ್ರಿ ಉತ್ತರ ವಾರ್ಡಿನ ಬಿಜೆಪಿ ಕಾರ್ಯಕರ್ತರ ಸಭೆ


ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ ಕದ್ರಿ ಉತ್ತರ ವಾರ್ಡಿನ ಕಾರ್ಯಕರ್ತರ ಸಭೆ ಶನಿವಾರ ನಡೆಯಿತು.


ಕಾರ್ಯಕ್ರಮಕ್ಕೂ ಮುನ್ನ ಮಂಗಳೂರಿನ ಸರ್ಕ್ಯೂಟ್ ಹೌಸ್‌ನಿಂದ ಕದ್ರಿ ಪಾರ್ಕ್ ಗೋರಕ್ಷನಾಥ ಸಭಾಭವನದವರೆಗೆ ಅದ್ಧೂರಿ ಮೆರವಣಿಗೆ ನಡೆಯಿತು. ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದ ಮಹಿಳಾ ಕಾರ್ಯಕರ್ತರು ಮೆರವಣಿಗೆಯುದ್ದಕ್ಕೂ ನರ್ತಿಸುತ್ತಾ, ಬಿಜೆಪಿಯ ಬೃಹತ್ ಧ್ವಜ ಹಾರಾಡಿಸುತ್ತಾ ಬಂದದ್ದು ವಿಶೇಷವಾಗಿತ್ತು. ಶಾಸಕ ಡಿ.ವೇದವ್ಯಾಸ್ ಕಾಮತ್ ಅವರನ್ನು ತೆರೆದ ವಾಹನದಲ್ಲಿ ಕರೆತರಲಾಯಿತು.


ಕಾರ್ಯಕ್ರಮವನ್ನು ಬಿಜೆಪಿ ಮುಖಂಡರು ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್,ಭಾರತೀಯ ಜನತಾ ಪಾಟೀಯ ವಿಚಾರಧಾರೆಗಳನ್ನು ಒಪ್ಪುವಂತಹ ವಾರ್ಡ್ ಇದಾಗಿದೆ.  ಕೇವಲ ಒಬ್ಬ ವ್ಯಕ್ತಿಯನ್ನು ಗೆಲ್ಲಿಸುವುದಷ್ಟೇ ಬಿಜೆಪಿ ಕಾರ್ಯಕರ್ತರ ಕಾರ್ಯವಲ್ಲ. ಈ ದೇಶದ ಆಚಾರ ವಿಚಾರ, ಮೌಲ್ಯಗಳನ್ನು ವೃದ್ಧಿಸುವ ನಿಟ್ಟಿನಲ್ಲಿ ಶ್ರಮಿಸಿ ಅದಕ್ಕಾಗಿ ಕಾರ್ಯ ನಿರ್ವಹಿಸುವ ವ್ಯಕ್ತಿಯನ್ನು ಚುನಾಯಿಸುವುದಷ್ಟೇ ಕಾರ್ಯಕರ್ತರ ಗುರಿ ಎಂದರು.


ಇದೇ ವೇಳೆ ಶಾಸಕ ಡಿ.ವೇದವ್ಯಾಸ ಕಾಮತ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಕಾರ್ಪೋರೇಟರ್, ಪಾಲಿಕೆ ಸ್ಥಾಯಿ ಸಮಿತಿ ಅಧ್ಯಕ್ಷೆ ಶಕಿಲಾ ಕಾವಾ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು.


ಉಪಮೇಯರ್ ಪೂರ್ಣಿಮಾ, ಸುಧೀರ್ ಶೆಟ್ಟಿ ಕಣ್ಣೂರು, ವಿಜಯಕುಮಾರ್ ಶೆಟ್ಟಿ, ಮೋನಪ್ಪ ಭಂಡಾರಿ, ಕಿಶೋರ್ ಕೊಟ್ಟಾರಿ, ನಿತಿನ್ ಕುಮಾರ್, ಭಾಸ್ಕರಚಂದ್ರ ಶೆಟ್ಟಿ, ರೂಪಾ ಡಿ.ಬಂಗೇರ ಮತ್ತಿತರ ಬಿಜೆಪಿ ಮುಖಂಡರು ಸಾವಿರಾರು ಕಾರ್ಯಕರ್ತರು ಉಪಸ್ಥಿತರಿದ್ದರು.

ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter


0 Comments

Post a Comment

Post a Comment (0)

Previous Post Next Post