ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ವಿವೇಕಾನಂದ ವಿದ್ಯಾವರ್ಧಕ ಸಂಘದ ಆಡಳಿತ ಮಂಡಳಿ ನಿರ್ದೇಶಕ ರಾಧಾಕೃಷ್ಣ ಭಕ್ತ ನಿಧನ

ವಿವೇಕಾನಂದ ವಿದ್ಯಾವರ್ಧಕ ಸಂಘದ ಆಡಳಿತ ಮಂಡಳಿ ನಿರ್ದೇಶಕ ರಾಧಾಕೃಷ್ಣ ಭಕ್ತ ನಿಧನ

 

ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘದ ಆಡಳಿತ ಮಂಡಳಿಯ ನಿರ್ದೇಶಕ ರಾಧಾಕೃಷ್ಣ ಭಕ್ತ ಪಿ. ಅವರು ಇಂದು ನಿಧನರಾದರು. ಅವರು ವಿದ್ಯಾವರ್ಧಕ ಸಂಘದ ಆಜೀವ ಸದಸ್ಯರಾಗಿದ್ದರು. ವಿವೇಕಾನಂದ ಪದವಿ ಕಾಲೇಜು, ಪದವಿ ಪೂರ್ವ ಕಾಲೇಜು, ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ & ಟೆಕ್ನಾಲಜಿಯ ಆಡಳಿತ ಸಮಿತಿ ಸಂಚಾಲಕರಾಗಿ ಸೇವೆ ಸಲ್ಲಿಸಿದ್ದರು. ಅಲ್ಲದೆ ವಿವೇಕಾನಂದ ಪಾಲಿಟೆಕ್ನಿಕ್ ನ ಆಡಳಿತ ಸಮಿತಿಯ ಸದಸ್ಯರಾಗಿ ಖಜಂಜಿಯಾಗಿ ವಿವೇಕಾನಂದ ಹಾಸ್ಟೆಲಿನ ಅಧ್ಯಕ್ಷರಾಗಿಯೂ ಸಮೂಹ ಸಂಸ್ಥೆಗಳ ಅಭಿವೃದ್ಧಿಗೆ ಶ್ರಮಿಸಿದ್ದರು.


ಅವರ ನಿಧನಕ್ಕೆ ವಿವೇಕಾನಂದ ವಿದ್ಯಾವರ್ಧಕ ಸಂಗದ ಅಧ್ಯಕ್ಷ ಡಾ. ಕೆ. ಪ್ರಭಾಕರ ಭಟ್ ಮತ್ತು ಕಾರ್ಯದರ್ಶಿ ಡಾ. ಕೆ.ಎಂ ಕೃಷ್ಣ ಭಟ್‌ ಸಂತಾಪ ಸೂಚಿಸಿದ್ದಾರೆ. ಅವರ ಆತ್ಮಕ್ಕೆ ಶಾಂತಿ ಸಿಗಲೆಂದು ಮತ್ತು ಇವರ ಅಗಲುವಿಕೆಯನ್ನು ಸಹಿಸುವ ಶಕ್ತಿಯನ್ನು ಅವರ ಕುಟುಂಬದ ಸದಸ್ಯರಿಗೆ ಆ ಭಗವಂತನು ನೀಡಲೆಂದು ಪ್ರಾರ್ಥಿಸುವುದಾಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

0 تعليقات

إرسال تعليق

Post a Comment (0)

أحدث أقدم