ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ವಿವೇಕಾನಂದ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಪ್ರೊ.ಕೆ.ಆರ್ ರವಿರಾವ್ ನಿಧನ

ವಿವೇಕಾನಂದ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಪ್ರೊ.ಕೆ.ಆರ್ ರವಿರಾವ್ ನಿಧನ


ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಪ್ರೊ.ಕೆ.ಆರ್ ರವಿರಾವ್ ಇಂದು ನಿಧನರಾಗಿದ್ದಾರೆ. 1965 ರಲ್ಲಿ ವಿವೇಕಾನಂದ ಕಾಲೇಜಿನ ಪ್ರಾಣಿ ಶಾಸ್ತ್ರ ವಿಭಾಗದಲ್ಲಿ ಉಪನ್ಯಾಸಕರಾಗಿ ಸೇರ್ಪಡೆಗೊಂಡಿರುವ ಇವರು  ನಂತರ ವಿಭಾಗ ಮುಖ್ಯಸ್ಥರಾಗಿಯೂ ಸೇವೆ ಸಲ್ಲಿಸಿದ್ದಾರೆ. ಸುಮಾರು 34ವರ್ಷಗಳ ಕಾಲ ವಿವೇಕಾನಂದ ಪದವಿ ಕಾಲೇಜಿನಲ್ಲಿ ದೀರ್ಘ ಸೇವೆ ಸಲ್ಲಿಸಿರುವ ಇವರು 2000 ದಲ್ಲಿ ಪ್ರಾಂಶುಪಾಲರಾಗಿ ನಿವೃತ್ತಿಗೊಂಡಿದ್ದರು.

ಮೂಲತಃ ಉಡುಪಿಯವರಾಗಿದ್ದು ವಿದ್ಯಾರ್ಥಿಗಳಿಗೆ ಎಲ್ಲರಿಗೂ ಅಚ್ಚಮೆಚ್ಚಿನ ಉಪನ್ಯಾಸಕರಾಗಿದ್ದರು. ಅಲ್ಪ ಕಾಲದ ಅಸೌಖ್ಯದಿಂದ ನಿಧನರಾಗಿರುವ ಪ್ರೊ.ಕೆ.ಆರ್ ರವಿರಾವ್ ಅವರ ನಿಧನಕ್ಕೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕರು ಹಾಗೂ ಉಪನ್ಯಾಸಕೇತರ ಬಂಧುಗಳು, ವಿದ್ಯಾರ್ಥಿಗಳು ಸಂತಾಪ ಸೂಚಿಸಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

0 Comments

Post a Comment

Post a Comment (0)

Previous Post Next Post