ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ವಿವೇಕಾನಂದ ಕಾಲೇಜಿನ ಕಛೇರಿ ನಿವೃತ್ತ ಅಧೀಕ್ಷಕ ಸೀತಾರಾಮ ಶೆಣೈ ನಿಧನ

ವಿವೇಕಾನಂದ ಕಾಲೇಜಿನ ಕಛೇರಿ ನಿವೃತ್ತ ಅಧೀಕ್ಷಕ ಸೀತಾರಾಮ ಶೆಣೈ ನಿಧನ



ಪುತ್ತೂರು: ಪುತ್ತೂರಿನ ವಿವೇಕಾನಂದ ಕಲಾ ವಿಜ್ಞಾನ ಹಾಗೂ ವಾಣಿಜ್ಯ (ಸ್ವಾಯತ್ತ) ಮಹಾವಿದ್ಯಾಲಯದ ಕಚೇರಿಯ ನಿವೃತ್ತ ಅಧೀಕ್ಷಕರಾದ ಸೀತಾರಾಮ ಶೆಣೈ  ನಿಧನರಾಗಿದ್ದಾರೆ. 1965ರಲ್ಲಿ ವಿವೇಕಾನಂದ ಕಾಲೇಜಿನ ಅಧ್ಯಾಪಕೇತರರ ಸಿಬ್ಬಂದಿಯಾಗಿ ಸೇರ್ಪಡೆಗೊಂಡಿರುವ ಇವರು ನಂತರ 1967ರಲ್ಲಿ ಕಛೇರಿಯ ಅಧೀಕ್ಷಕರಾಗಿ ಸೇವೆ ಸಲ್ಲಿಸಿದ್ದಾರೆ. ಸುಮಾರು 34 ವರ್ಷಗಳ ಕಾಲ ಪುತ್ತೂರಿನ ವಿವೇಕಾನಂದ ಪದವಿ ಕಾಲೇಜಿನಲ್ಲಿ ದೀರ್ಘ ಸೇವೆ ಸಲ್ಲಿಸಿರುವ ಇವರು 2001ರಲ್ಲಿ ನಿವೃತ್ತಿಗೊಂಡಿದ್ದರು.


ಕಾಲೇಜಿನಲ್ಲಿ ಅಧ್ಯಾಪಕೇತರ ನೌಕರರ ಸಂಘವನ್ನು ಇವರ ನೇತೃತ್ವದಲ್ಲಿ ಆರಂಭಿಸಲಾಗಿತ್ತು. ಅಲ್ಪ ಕಾಲದ ಅಸೌಖ್ಯದಿಂದ ಸ್ವಗೃಹದಲ್ಲಿ ನಿಧನರಾಗಿರುವ ಸೀತಾರಾಮ ಶೆಣೈ ಅವರ ನಿಧನಕ್ಕೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕರು ಹಾಗೂ ಉಪನ್ಯಾಸಕೇತರ ಬಂಧುಗಳು, ವಿದ್ಯಾರ್ಥಿಗಳು ಸಂತಾಪ ಸೂಚಿಸಿದ್ದಾರೆ.


 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter 

0 تعليقات

إرسال تعليق

Post a Comment (0)

أحدث أقدم