ಪೆರ್ಲ: ಆಟೋ ರಿಕ್ಷಾ ಹಾಗೂ ಶಾಲಾ ಬಸ್ ಪರಸ್ಪರ ಡಿಕ್ಕಿಯಾಗಿ ರಿಕ್ಷಾದಲ್ಲಿ ಸಂಚರಿಸುತ್ತಿದ್ದ ಐದು ಮಂದಿ ಸ್ಥಳದಲ್ಲಿಯೇ ಸಾವನ್ನಪ್ಪಿದ ದಾರುಣ ಘಟನೆ ಸೋಮವಾರ ಸಂಜೆ 5 ಗಂಟೆಗೆ ಬದಿಯಡ್ಕ ಸಮೀಪದ ಪಳ್ಳತ್ತಡ್ಕದಲ್ಲಿ ನಡೆದಿದೆ. ತಾಯಲಂಗಡಿ ನಿವಾಸಿ ಪ್ರಸ್ತುತ ಮೊಗ್ರಾಲಿನಲ್ಲಿ ವಾಸಿಸುವ ರಿಕ್ಷಾ ಡ್ರೈವರ್ ಅಬ್ದುಲ್ ರವೂಫ್ (58), ಮೊಗ್ರಾಲಿನ ಉಸ್ಮಾನ್ ಎಂಬವರ ಪತ್ನಿ ಬೀಫಾತಿಮಾ (50), ಷೇಕ್ ಅಲಿ ಎಂಬವರ ಪತ್ನಿ ಬೀಫಾತಿಮಾ (60), ಇಸ್ಮಾಯಿಲ್ ಅವರ ಪತ್ನಿ ಉಮ್ಮು ಅಲಿಮಾ, ಬೆಳ್ಳೂರು ಅಬ್ಬಾಸ್ ಎಂಬವರ ಪತ್ನಿ ನಫೀಸ ಎಂದು ಗುರುತಿಸಲಾಗಿದೆ.
ಪೆರ್ಲ ಭಾಗದಿಂದ ತೆರಳುತ್ತಿದ್ದ ಮಾನ್ಯದ ಆಂಗ್ಲ ಮಾಧ್ಯಮ ಶಾಲೆಗೆ ಸೇರಿದ ಬಸ್ ಮತ್ತು ಮೊಗ್ರಾಲ್ ಪುತ್ತೂರು ಮೂಲದ ರಿಕ್ಷಾ ಅಪಘಾತಕ್ಕೀಡಾಗಿರುವುದಾಗಿ ಪ್ರಾಥಮಿಕ ವರದಿಯಾಗಿದೆ. ರಿಕ್ಷಾದಲ್ಲಿ ಸಂಚರಿಸುತ್ತಿದ್ದ ಡ್ರೈವರ್ ಸಹಿತ ನಾಲ್ವರು ಮಹಿಳೆಯರು ಸಾವನ್ನಪ್ಪಿದ್ದಾರೆ. ಮಕ್ಕಳನ್ನು ಪೆರ್ಲ ಭಾಗದಲ್ಲಿ ಇಳಿಸಿದ ಶಾಲಾ ಬಸ್ ಖಾಲಿಯಾಗಿ ಸಂಚರಿಸುತ್ತಿದ್ದಾಗ ಪಳ್ಳತ್ತಡ್ಕದ ಗುಳಿಗ ಬನದ ಸಮೀಪದ ತಿರುವಿನಲ್ಲಿ ಈ ದುರ್ಘಟನೆ ನಡೆದಿದೆ.
ಮೃತರ ಪರಿಚಯ ಸ್ಥಳದಲ್ಲಿ ಇದ್ದವರಿಗೆ ಮಾಹಿತಿ ಇಲ್ಲವಾದ್ದರಿಂದ ಗುರುತು ಪತ್ತೆ ಹಚ್ಚಲು ಗಂಟೆಗಳಷ್ಟು ಕಾಲ ಪರದಾಡಬೇಕಾಯಿತು. ಡಿಕ್ಕಿ ಹೊಡೆದ ರಭಸಕ್ಕೆ ರಿಕ್ಷಾ ಸಂಪೂರ್ಣ ನುಜ್ಜುಗುುಜ್ಜಾಗಿದೆ. ಮೃತದೇಹಗಳನ್ನು ಕಾಸರಗೋಡು ಜನರಲ್ ಆಸ್ಪತ್ರೆಯ ಶವಗಾರಕ್ಕೆ ಸಾಗಿಸಲಾಗಿದೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಚಾನೆಲ್ ಫಾಲೋ ಮಾಡಲು ಈ ಲಿಂಕ್ ಕ್ಲಿಕ್ ಮಾಡಿ
إرسال تعليق