ಉಜಿರೆ: ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಯ ಉಜಿರೆಯಲ್ಲಿರುವ ಪ್ರಧಾನ ಕಾರ್ಯಾಲಯದಲ್ಲಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಹರೀಶ್ ಎಂ.ವೈ. (62) ಶನಿವಾರ ಹೃದಯಾಘಾತದಿಂದ ನಿಧನರಾದರು.
ಅವರಿಗೆ ಪತ್ನಿ ಮತ್ತು ಇಬ್ಬರು ಪುತ್ರರು ಇದ್ದಾರೆ.
ಸಿದ್ಧವನ ಗುರುಕುಲ ಮತ್ತು ಎಸ್‌ಡಿಎಂ ಕಾಲೇಜಿನ ಹಿರಿಯ ವಿದ್ಯಾರ್ಥಿಯಾಗಿದ್ದ ಅವರು ಕೆನರಾ ಬ್ಯಾಂಕಿನಲ್ಲಿ ಮೆನೇಜರ್ ಆಗಿ ಸ್ವಯಂ ನಿವೃತ್ತಿ ಪಡೆದುಕೊಂಡು ಕಳೆದ ಎರಡು ವರ್ಷಗಳಿಂದ ಉಜಿರೆಯಲ್ಲಿ ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ಪ್ರಧಾನ ಕಾರ್ಯಾಲಯದಲ್ಲಿ ಸಿಇಒ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಚಾನೆಲ್ ಫಾಲೋ ಮಾಡಲು ಈ ಲಿಂಕ್ ಕ್ಲಿಕ್ ಮಾಡಿ
إرسال تعليق