ಕೆ.ಆರ್.ಪೇಟೆ: ಪಟ್ಟಣದ ಚೆಸ್ಕಾಂ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ರಾಜಶೇಖರ್ ಮೂರ್ತಿ (55) ಅವರು ಭಾನುವಾರ ಮಧ್ಯಾಹ್ನ ನಿಧನ ಹೊಂದಿರುತ್ತಾರೆ.
ಮೃತರು ಸಿಂಗಮಾರನಹಳ್ಳಿ ಗ್ರಾ.ಪಂ.ಪಿಡಿಓ ಆಗಿ ಸೇವೆ ಸಲ್ಲಿಸುತ್ತಿರುವ ಪತ್ನಿ ಮಂಜುಳಾ ಸೇರಿದಂತೆ ಅಪಾರ ಬಂದು-ಬಳಗವನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆಯು ಮೈಸೂರು ಸಮೀಪದ ಆಲನಹಳ್ಳಿ ಗ್ರಾಮದಲ್ಲಿ ಅ.30ರಂದು ಸೋಮವಾರ ಮಧ್ಯಾಹ್ನ ನಡೆಯಿತು ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಮೃತರ ನಿಧನಕ್ಕೆ ಚೆಸ್ಕಾಂ ಕೆ.ಆರ್.ಪೇಟೆ ಡಿವಿಜನ್ ಕಾರ್ಯನಿರ್ವಾಹಕ ಇಂಜಿನಿಯರ್ ವಿನುತ ಸೇರಿದಂತೆ ಚೆಸ್ಕಾಂ ಇಲಾಖೆಯ ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಹಾಗೂ ತಾಲ್ಲೂಕಿನ ವಿವಿಧ ಗಣ್ಯರು ಸಂತಾಪ ಸೂಚಿಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ
إرسال تعليق