ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಕಲ್ಲಡ್ಕ: ಕಾರು ಡಿಕ್ಕಿ ಹೊಡೆದು ಪಾದಚಾರಿ ಯುವತಿ ಸಾವು

ಕಲ್ಲಡ್ಕ: ಕಾರು ಡಿಕ್ಕಿ ಹೊಡೆದು ಪಾದಚಾರಿ ಯುವತಿ ಸಾವು



ಕಲ್ಲಡ್ಕ: ಕಾರು ಡಿಕ್ಕಿ ಹೊಡೆದು ಪಾದಚಾರಿ ಯುವತಿಯೋರ್ವಳು ಮೃತಪಟ್ಟ ಘಟನೆ ಗುರುವಾರ ಸಂಜೆ ಸುಮಾರು 6.30ಕ್ಕೆ ರಾಷ್ಟ್ರೀಯ ಹೆದ್ದಾರಿ 75ರ ಕಲ್ಲಡ್ಕ ಸಮೀಪದ ದಾಸಕೋಡಿ ಎಂಬಲ್ಲಿ ನಡೆದಿದೆ.


ವೀರಕಂಭ ಗ್ರಾಮದ ಬಾಯಿಲ ನಿವಾಸಿ ಶೇಖರ ಪೂಜಾರಿ ಅವರ ಪುತ್ರಿ ಪಾವನ (23) ಮೃತಪಟ್ಟ ಯುವತಿ.


ಬಿ.ಸಿ.ರೋಡಿನ ಸ್ಕ್ಯಾನಿಂಗ್ ಸೆಂಟರ್‌ನಲ್ಲಿ ಕೆಲಸ ಮಾಡುತ್ತಿದ್ದ ಯುವತಿ ಸಂಜೆ ಕೆಲಸ ಬಿಟ್ಟು ಬಿಸಿರೋಡಿನಿಂದ ಬಸ್ ಮೂಲಕ ಬಂದು ದಾಸಕೋಡಿ ಎಂಬಲ್ಲಿ ಬಸ್ಸ್ ನಿಂದ ಇಳಿದು ಹೆದ್ದಾರಿ ಬದಿಯಲ್ಲಿ ನಡೆದುಕೊಂಡು ಹೋಗುವ ವೇಳೆ ಕಾರು ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಯುವತಿ ರಸ್ತೆ ಬದಿಯ ತೋಡಿಗೆ ಎಸೆಯಲ್ಪಟ್ಟಿದ್ದಾಳೆ. ಕಾರು ಕೂಡ ಪಲ್ಟಿಯಾಗಿದೆ.


ಯುವತಿಯ ಮೃತದೇಹವನ್ನು ಮರಣೋತ್ತರ ಪರೀಕ್ಷೆ ಗಾಗಿ ಬಂಟ್ವಾಳ ಸರಕಾರಿ ಆಸ್ಪತ್ರೆಯ ಶವಗಾರದಲ್ಲಿಡಲಾಗಿದೆ. ಘಟನಾ ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಪೋಲೀಸರು ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕಾಂಕ್ರೀಟ್ ರಸ್ತೆಯಲ್ಲಿ ಅತೀ ವೇಗದ ಚಾಲನೆ ಅಪಘಾತಕ್ಕೆ ಕಾರಣವಾಗುತ್ತಿದೆ ಎಂಬ ಆರೋಪ ಸ್ಥಳೀಯರಿಂದ ಕೇಳಿಬಂದಿದೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 


0 Comments

Post a Comment

Post a Comment (0)

Previous Post Next Post