ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಮಂಗಳೂರು: ಫುಟ್ ಪಾತ್ ಏರಿದ ಕಾರು - ಓರ್ವ ಯುವತಿ ಮೃತ್ಯು, ನಾಲ್ವರಿಗೆ ಗಾಯ

ಮಂಗಳೂರು: ಫುಟ್ ಪಾತ್ ಏರಿದ ಕಾರು - ಓರ್ವ ಯುವತಿ ಮೃತ್ಯು, ನಾಲ್ವರಿಗೆ ಗಾಯ



ಮಂಗಳೂರು: ಲೇಡಿಹಿಲ್ ಬಳಿ ಫುಟ್ ಪಾತ್‌ನಲ್ಲಿ ನಡೆದುಕೊಂಡು ಹೋಗುತ್ತಿದ್ದ ಐದು ಮಂದಿಗೆ ಕಾರು ಢಿಕ್ಕಿಯಾಗಿ ಓರ್ವ ಯುವತಿ ಮೃತಪಟ್ಟ ಘಟನೆ ನಡೆದಿದೆ.


ರೂಪಶ್ರೀ (23) ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದು, ಸ್ವಾತಿ (26) ಹಿತಾನ್ವಿ (16), ಕೃತಿಕಾ (16), ಯತಿಕಾ (12) ಗಂಭೀರ ಗಾಯಗೊಂಡ ಇತರ ನಾಲ್ವರು ಯುವತಿಯರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.


ಬುಧವಾರ ಸಂಜೆ ಈ ಅಪಘಾತ ಸಂಭವಿಸಿದ್ದು, ಕಾರು ಮಣ್ಣಗುಡ್ಡ ಕಡೆಯಿಂದ ಲೇಡಿಹಿಲ್ ಕಡೆಗೆ ಅತೀ ವೇಗ ಮತ್ತು ನಿರ್ಲಕ್ಷ್ಯದ ದ ಚಾಲನೆಯೊಂದಿಗೆ ಬಂದಿದ್ದು ಎಸ್‌ ಎಲ್ ಶೇಟ್ ಜ್ಯುವೆಲ್ಲರಿ ಬಳಿ ಫುಟ್‌ ಪಾತಿನಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವತಿಯರ ಮೇಲೆ ಹಾರಿಸಿಕೊಂಡು ಹೋಗಿದ್ದಾನೆ.

 



ಅಪಘಾತ ನಡಸಿದ ಬಳಿಕ ಸ್ಥಳದಿಂದ ಕಾರು ಸಮೇತ ಪರಾರಿಯಾಗಿದ್ದ ಚಾಲಕ ಕಮಲೇಶ್ ಬಲದೇವ್ ಕಾರನ್ನು ಹೋಂಡಾ ಶೋ ರೂಂ ಬಳಿ ನಿಲ್ಲಿಸಿ ಮನೆಗೆ ಹೋಗಿದ್ದಾನೆ. ಬಳಿಕ ತಂದೆ ಹೆಚ್‌ಎಂ ಬಲದೇವ್ ಅವರೊಂದಿಗೆ ಪಶ್ಚಿಮ ಸಂಚಾರಿ ಠಾಣೆಗೆ ಬಂದು ಶರಣಾಗಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.



ಪೊಲೀಸರು ಆರೋಪಿಯನ್ನು ಬಂಧಿಸಿ ಪ್ರಕರಣ ದಾಖಲು ಮಾಡಿದ್ದಾರೆ. ಅಪಘಾತ ಭೀಕರ ದೃಶ್ಯ ಸ್ಥಳೀಯ ಸಿಸಿ ಟಿವಿಯಲ್ಲಿ ದಾಖಲಾಗಿದೆ.


******

ಅಪಘಾತ ಆದಾಗ ಪೆಟ್ಟಾದವರನ್ನು  ಸ್ಟ್ರೆಚರ್‌ ನಲ್ಲಿ ಸಾಗಿಸಿದರೆ ಒಳ್ಳೆಯದು. ಕುತ್ತಿಗೆ ನೇರವೆ ಇರಿಸಿ, ಮಲಗಿಸಿ ಆಸ್ಪತ್ರೆ ಸೇರಿಸಿದರೆ, ತೊಂದರೆ ಆಗದು. ಇಲ್ಲದಿದ್ದರೆ ಮುರಿದ ಮೂಳೆ ಇನ್ನೂ ಹೆಚ್ಚು ಮುರಿದು ಸಾಯುವ ಸಾಧ್ಯತೆ ಹೆಚ್ಚು . ಆದ್ದರಿಂದ ಆಂಬುಲೆನ್ಸ್ ಕರೆಸುವುದು ಉತ್ತಮ.

-ಡಾ. ಸಂಧ್ಯಾ


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

0 Comments

Post a Comment

Post a Comment (0)

Previous Post Next Post