ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಪೇಜಾವರ ಶ್ರೀಗಳಿಗೆ ಪಿತೃ ವಿಯೋಗ: ಶತಾಯುಷಿ ವಿದ್ವಾನ್ ಅಂಗಡಿಮಾರು ಕೃಷ್ಣಭಟ್ಟರು ಅಸ್ತಂಗತ

ಪೇಜಾವರ ಶ್ರೀಗಳಿಗೆ ಪಿತೃ ವಿಯೋಗ: ಶತಾಯುಷಿ ವಿದ್ವಾನ್ ಅಂಗಡಿಮಾರು ಕೃಷ್ಣಭಟ್ಟರು ಅಸ್ತಂಗತ


ಉಡುಪಿ: ಶ್ರೀ ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರ ಪೂರ್ವಾಶ್ರಮದ ತೀರ್ಥರೂಪರೂ, ಹಿರಿಯ ಸಂಸ್ಕೃತ ಮತ್ತು ತುಳು ಭಾಷಾ ವಿದ್ವಾಂಸ ಅಂಗಡಿಮಾರು ಕೃಷ್ಣ ಭಟ್ಟರು ಭಾನುವಾರ ರಾತ್ರಿ ಹಳೆಯಂಗಡಿ ಸಮೀಪದ ಪಕ್ಷಿಕೆರೆಯಲ್ಲಿರುವ ಸ್ವಗೃಹದಲ್ಲಿ ವಯೋಸಹಜ ಅಸ್ವಾಸ್ಥ್ಯದಿಂದ ನಿಧನರಾದರು. ಅವರಿಗೆ 105 ವರ್ಷ ವಯಸ್ಸಾಗಿತ್ತು.


ತುಳು ಭಾಷೆಯ ಸೌರ ಪಂಚಾಂಗವನ್ನು ಅತ್ಯಂತ ಶ್ರದ್ಧೆಯಿಂದ ಅನೇಕ ವರ್ಷಗಳಿಂದ ರಚಿಸಿ ಪ್ರಕಟಿಸುತ್ತಿದ್ದರು. ಸಂಪ್ರದಾಯ ಸದಾಚಾರ ನಿಷ್ಠರೂ ಅಪಾರ ದೈವಭಕ್ತರೂ ಆಗಿದ್ದ ಅವರಿಗೆ ಮಂಗಳೂರು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಸಹಿತ ಅನೇಕ ಮಠಾಧೀಶರು ಸಂಘ ಸಂಸ್ಥೆಗಳಿಂದ ಗೌರವ ಪುರಸ್ಕಾರಗಳು ಸಂದಿವೆ. ಶ್ರೀಯುತ ಭಟ್ಟರು ಐವರು ಸುಪುತ್ರರು ಮತ್ತು ಆರು ಪುತ್ರಿಯರನ್ನು ಅಪಾರ ಬಂಧುವರ್ಗವನ್ನು ಅಗಲಿದ್ದಾರೆ.‌


ಪುತ್ರ ವಿಶ್ವೇಶ್ವರ ಭಟ್ ಜೊತೆ ವಾಸವಿದ್ದ ಅವರು ಸಾಂಪ್ರದಾಯಿಕ ಕೃಷಿಕರೂ, ವೈದಿಕ ವಿದ್ವಾಂಸರೂ ಆಗಿದ್ದ ದಿವಂಗತರು ತುಳು ಲಿಪಿಕಾರರಾಗಿ, ಪಂಚಾಂಗ ಕರ್ತರಾಗಿ ಅನೇಕ ಕನ್ನಡ ಹಾಗೂ ತುಳು ಭಜನೆ, ಪ್ರಾರ್ಥನಾ ಶ್ಲೋಕಗಳನ್ನು ರಚಿಸುವ ಮೂಲಕ ಸಾರಸ್ವತ ಲೋಕಕ್ಕೆ ತನ್ನದೇ ಆದ ಕೊಡುಗೆ ನೀಡಿದ್ದರು.


ಐದು ವೇದಗಳನ್ನು ಅಧ್ಯಯನ ಮಾಡಿರುವ ಇವರು ಸಂಹಿತಾ ಯಾಗಗಳು, ಮತ್ತಿನ್ನಿತರ ಯಾಗಗಳನ್ನು ಮಾಡಿರುವ ಸಾಧಕರೆನಿಸಿದ್ದರು. ದಶಕಗಳ ಹಿಂದೆ ಪತ್ನಿ ಯಮುನಾ ಭಟ್ ಅವರನ್ನು ಕಳೆದುಕೊಂಡಿದ್ದ ಇವರು ತನ್ನ ಎಂಟನೇ ಪುತ್ರ ಪೇಜಾವರ ಶ್ರೀ ವಿಶ್ವ ಪ್ರಸನ್ನ ತೀರ್ಥ ರ ಸಹಿತ ಐದು ಮಂದಿ ಪುತ್ರರು ಹಾಗೂ ಏಳು ಮಂದಿ ಪುತ್ರಿಯರನ್ನು ಅಲ್ಲದೇ ಅಪಾರ ಅಭಿಮಾನಿಗಳನ್ನು ಅಗಲಿರುವರು.


ಇವರು ಗೈದಿರುವ ಜೀವಮಾನ ಸಾಧನೆಗಾಗಿ ಕೃಷ್ಣಾನುಗ್ರಹ ಪ್ರಶಸ್ತಿ, ಕಲ್ಕೂರ ಪ್ರತಿಷ್ಠಾನದಿಂದ ನೀಡಲಾದ ಪೇಜಾವರ ಶ್ರೀ ಜೀವಮಾನ ಪ್ರಶಸ್ತಿ, ಬ್ರಾಹ್ಮಣರ ಸಮ್ಮೇಳನದ ಗೌರವ ಪುರಸ್ಕಾರ ಸಹಿತ ಅನೇಕಾನೇಕ ಗೌರವಾಭಿನಂದನೆಗಳು ಪ್ರಾಪ್ತವಾಗಿವೆ. ಇಂದು ಮಧ್ಯಾಹ್ನ 12ಕ್ಕೆ ಪಕ್ಷಿಕೆರೆಯ ಸ್ವಗೃಹದಲ್ಲಿ ಅಂತ್ಯಕ್ರಿಯೆ ಜರಗಿತು.



ಸಂತಾಪ: ಪರ್ಯಾಯ ಶ್ರೀ ಕೃಷ್ಣಾಪುರ  ಮಠಾಧೀಶರು, ಪಲಿಮಾರು ಉಭಯಶ್ರೀಗಳು, ಶ್ರೀ ಸೋದೆ ಶ್ರೀಗಳು, ಕಾಣಿಯೂರು ಶ್ರೀ, ಭಂಡಾರಕೆರೆ ಶ್ರೀಗಳು, ಮೂಡಬಿದ್ರೆ ಜೈನ ಮಠಾಧೀಶರು, ವಜ್ರದೇಹಿ ಸ್ವಾಮೀಜಿ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಶಾಸಕರಾದ ಯಶ್ಪಾಲ್ ಸುವರ್ಣ ಗುರ್ಮೆ ಸುರೇಶ ಶೆಟ್ಟಿ, ಕೋಟ ಶ್ರೀನಿವಾಸ ಪೂಜಾರಿ, ಮಾಜಿ ಶಾಸಕ ಕೆ ರಘುಪತಿ ಭಟ್, ಪೇಜಾವರ ಮಠದ ಆಡಳಿತ ವರ್ಗ, ಕರಂಬಳ್ಳಿ ವಲಯ ಬ್ರಾಹ್ಮಣ ಸಮಿತಿ ಮೊದಲಾದವರು ಶ್ರೀ ಕೃಷ್ಣ ಭಟ್ಟರ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 


0 Comments

Post a Comment

Post a Comment (0)

Previous Post Next Post