ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಮಾಜಿ ರಾಜ್ಯಪಾಲ ಪಿ.ಬಿ. ಆಚಾರ್ಯ ನಿಧನ

ಮಾಜಿ ರಾಜ್ಯಪಾಲ ಪಿ.ಬಿ. ಆಚಾರ್ಯ ನಿಧನ



ಉಡುಪಿ: ಈಶಾನ್ಯ ರಾಜ್ಯಗಳ ರಾಜ್ಯಪಾಲರಾಗಿದ್ದ ಉಡುಪಿ ಮೂಲದ ಪದ್ಮನಾಭ ಬಾಲಕೃಷ್ಣ ಆಚಾರ್ಯ (ಪಿ.ಬಿ ಆಚಾರ್ಯ) ಇಂದು (ನ.10) ತಮ್ಮ ಮುಂಬಯಿಯ ನಿವಾಸದಲ್ಲಿ ನಿಧನರಾದರು. ಅವರಿಗೆ 92 ವರ್ಷ ವಯಸ್ಸಾಗಿತ್ತು.


ಅವರು ಪತ್ನಿ ಸವಿತಾ ಆಚಾರ್ಯ, ಮೂವರು ಪುತ್ರರು ಹಾಗೂ ಒಬ್ಬ ಪುತ್ರಿಯನ್ನು ಅಗಲಿದ್ದಾರೆ.


ಅವರು ಮಣಿಪುರ, ನಾಗಾಲ್ಯಾಂಡ್, ಅರುಣಾಚಲ ಪ್ರದೇಶದ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ್ದರು.


1931ರ ಅಕ್ಟೋಬರ್ 8ರಂದು ಉಡುಪಿಯಲ್ಲಿ ಬಾಲಕೃಷ್ಣ ಮತ್ತು ರಾಧಾ ಆಚಾರ್ಯ ದಂಪತಿಗಳ ಮಗನಾಗಿ ಜನಿಸಿದ್ದರು. ಉಡುಪಿಯ ಕ್ರಿಶ್ಚಿಯನ್ ಹೈಸ್ಕೂಲಿನಲ್ಲಿ ಪ್ರೌಢಶಿಕ್ಷಣ ಮುಗಿಸಿದ ಅವರು ಬಳಿಕ ಎಂಜಿಂಎ ಕಾಲೇಜಿನಲ್ಲಿ ಆರಂಭಿಕ ಪದವಿ ಬ್ಯಾಚ್‌ನ ವಿದ್ಯಾರ್ಥಿಯಾಗಿದ್ದರು.


ಆ ಬಳಿಕ ಮುಂಬಯಿಗೆ ತೆರಳಿದ ಅವರು, ಶಿಕ್ಷಣ ಮತ್ತು ಉದ್ಯೋಗ ಎರಡನ್ನೂ ಒಟ್ಟಾಗಿ ನಿರ್ವಹಿಸುತ್ತ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ ರಾಷ್ಟ್ರೀಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.


ಇದನ್ನೂ ಓದಿ: ಮಾಜಿ ರಾಜ್ಯಪಾಲ ಶ್ರೀ ಪಿ ಬಿ ಆಚಾರ್ಯ ಒಂದು ಸ್ಮರಣೆ


ಮುಂಬಯಿ ವಿಶ್ವವಿದ್ಯಾನಿಲಯದಲ್ಲಿ ಎಲ್‌ಎಲ್‌ಬಿ ಪದವಿ ಪಡೆದು ಅದೇ ವಿವಿಯ ಸೆನೆಟ್ ಸದಸ್ಯರಾಗಿದ್ದರು. ಸಂಘ ಪರಿವಾರದ ವಿವಿಧ ಸಂಘಟನೆಗಳಲ್ಲಿ ಸಕ್ರಿಯರಾಗಿ ಕರ್ತವ್ಯ ನಿರ್ವಹಿಸಿದ್ದ ಅವರು, ಈಶಾನ್ಯ ರಾಜ್ಯಗಳ ಅಭಿವೃದ್ಧಿ ಮತ್ತು ಶೈಕ್ಷಣಿಕ ವಿಚಾರಗಳಲ್ಲಿ ಅಪಾರ ಜ್ಞಾನ ಹೊಂದಿದ್ದರು.


ರಾಜ್ಯಪಾಲರಾಗಿದ್ದ ಅವಧಿಯಲ್ಲೂ ಮಂಗಳೂರು, ಉಡುಪಿಗಳಿಗೆ ಆಗಾಗ್ಗೆ ಭೇಟಿ ನೀಡುತ್ತಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

0 Comments

Post a Comment

Post a Comment (0)

Previous Post Next Post