ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ‌ ನಿಧನ

ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ‌ ನಿಧನ



ಬೆಂಗಳೂರು: ಯಾದಗಿರಿ ಜಿಲ್ಲೆ ಸುರಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ ನಿಧನರಾಗಿದ್ದಾರೆ. ಅವರಿಗೆ 67 ವರ್ಷ ವಯಸ್ಸಾಗಿತ್ತು. ಹೃದಯಾಘಾತದಿಂದ ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಇಂದು ಕೊನೆಯುಸಿರೆಳೆದಿದ್ದಾರೆ ಎನ್ನಲಾಗಿದೆ.


ನಾಲ್ಕು ಬಾರಿ ಶಾಸಕರಾಗಿದ್ದ ರಾಜಾ ವೆಂಕಟಪ್ಪ ನಾಯಕ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಆಪ್ತರಾಗಿದ್ದರು. ಕಾಂಗ್ರೆಸ್​ನಿಂದಲೇ ರಾಜಕೀಯ ಜೀವನ ಆರಂಭಿಸಿದ್ದ ರಾಜಾ ವೆಂಕಟಪ್ಪ ನಾಯಕ ಇತ್ತೀಚೆಗೆ ಉಗ್ರಾಣ ನಿಗಮದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದರು.


ಮೃತರು ಇಬ್ಬರು, ಪುತ್ರರು, ಅಭಿಮಾನಿಗಳನ್ನು ಅಗಲಿದ್ದಾರೆ. ಅವರ ನಿಧನಕ್ಕೆ ಸಿಎಂ ಸಿದ್ದರಾಮಯ್ಯ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

0 Comments

Post a Comment

Post a Comment (0)

Previous Post Next Post