ಮಂಗಳೂರು: ಸುರತ್ಕಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಂಗಳವಾರ ನಾಪತ್ತೆಯಾಗಿದ್ದ ಖಾಸಗಿ ಶಾಲೆಯ ನಾಲ್ವರು ವಿದ್ಯಾರ್ಥಿಗಳು ಹಳೆಯಂಗಡಿಯ ಕೊಪ್ಪಳ ಅಣೆಕಟ್ಟಿನ ರೈಲ್ವೇ ಸೇತುವೆಯ ಕೆಳಭಾಗದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.
ಸುರತ್ಕಲ್ ಅಗರಮೇಲ್ ನಿವಾಸಿ ಚಂದ್ರಕಾಂತ ಎಂಬವರ ಪುತ್ರ ಯಶ್ವಿತ್ (15, ಹಳೆಯಂಗಡಿ ತೋಕೂರು ನಿವಾಶಿ ವಸಂತ ಅವರ ಪುತ್ರ ರಾಘವೇಂದ್ರ (15), ಸುರತ್ಕಲ್ ಗುಡ್ಡೆಕೊಪ್ಪ ನಿವಾಸಿ ವಿಶ್ವನಾಥ ಎಂಬವರ ಪುತ್ರ ನಿರೂಪ (15) ಹಾಗೂ ಚಿತ್ರಾಪುರದ ದೇವದಾಸ್ ಎಂಬವರ ಪುತ್ರ ಅನ್ವಿತ್ (15) ಎಂದು ಇವರನ್ನು ಗುರುತಿಸಲಾಗಿದೆ.
ಈ ಮಕ್ಕಳೆಲ್ಲರೂ ಸುರತ್ಕಲ್ ವಿದ್ಯಾದಾಯಿನಿ ಶಾಲೆಯ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಾಗಿದ್ದು, ಮಂಗಳವಾರ ನಡೆದ ಇಂಗ್ಲಿಷ್ ಪೂರ್ವಸಿದ್ಧತಾ ಪರೀಕ್ಷೆ ಬರೆದು ಮನೆಗೆ ಬಾರದೆ ಕಾಣೆಯಾಗಿದ್ದರು. ಈ ಮಕ್ಕಳ ಪೋಷಕರು ರಾತ್ರಿಯೇ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದರು.
ಪ್ರಕರಣ ದಾಖಲಾದ ಕೂಡಲೇ ಕಾರ್ಯಾಚರಣೆಗೆ ಇಳಿದ ಪೊಲೀಸರು, ಶಾಲೆ ಮತ್ತು ಬಸ್ ನಿಲ್ದಾಣದ ಬಳಿಯ ಸಿಸಿಟಿವಿ ದೃಶ್ಯಾವಳಿಗಳನ್ನು ತರಿಸಿಕೊಂಡಿದ್ದಾರೆ. ವಿದ್ಯಾರ್ಥಿಗಳು ಸುರತ್ಕಲ್ ಬಸ್ ನಿಲ್ದಾಣದಿಂದ ಬಸ್ ಹತ್ತಿ ಹಳೆಯಂಗಡಿ ಬಸ್ ನಿಲ್ದಾಣದಲ್ಲಿ ಬಸ್‌ನಿಂದ ಇಳಿದಿರುವುದನ್ನು ಪತ್ತೆ ಹಚ್ಚಿದರು. ವಿದ್ಯಾರ್ಥಿಯೊಬ್ಬನ ಬಳಿ ಇತ್ತೆನ್ನಲಾದ ಮೊಬೈಲ್‌ನ ಟವರ್ ಲೊಕೇಶನ್ ಆಧರಿಸಿ ವಿದ್ಯಾರ್ಥಿಗಳು ನದಿಯ ದಡಕ್ಕೆ ಬಂದಿರುವುದನ್ನು ಖಚಿತಪಡಿಸಿಕೊಂಡು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದಾಗ ನದಿಯ ದಡದಲ್ಲಿ ಮಕ್ಕಳ ಚೀಲಗಳು, ಚಪ್ಪಲಿ, ಸಮವಸ್ತ್ರಗಳು ಕಾಣಿಸಿವೆ.
ನಂತರ ಎಲ್ಲ ಶವಗಳನ್ನು ಮರಣೋತ್ತರ ಪರೀಕ್ಷೆಗಾಗಿ ವೆನ್ಲಾಕ್ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ
إرسال تعليق