ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಹೈದರಾಬಾದ್: ಬಿಆರ್‌ಎಸ್ ಶಾಸಕಿ ಲಾಸ್ಯ ನಂದಿತಾ ರಸ್ತೆ ಅಪಘಾತದಲ್ಲಿ ಸಾವು

ಹೈದರಾಬಾದ್: ಬಿಆರ್‌ಎಸ್ ಶಾಸಕಿ ಲಾಸ್ಯ ನಂದಿತಾ ರಸ್ತೆ ಅಪಘಾತದಲ್ಲಿ ಸಾವು



ಹೈದ್ರಾಬಾದ್: ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆಯ ತಡೆಗೋಡೆಗೆ ಡಿಕ್ಕಿ ಹೊಡೆದ ಪರಿಣಾಮ ತೆಲಂಗಾಣದ ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್‌) ಪಕ್ಷದ ಶಾಸಕಿ ಲಾಸ್ಯ ನಂದಿತಾ ಮೃತಪಟ್ಟಿದ್ದಾರೆ. ಹೈದರಾಬಾದ್‌ ಸಮೀಪದ ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯ ಪಟ್ಟಂಚೆರು ಹೊರವಲಯದ ರಸ್ತೆಯಲ್ಲಿ ಇಂದು (ಫೆ.23) ಮುಂಜಾನೆ ಅಪಘಾತ ಸಂಭವಿಸಿದೆ.


ಕೇವಲ 37 ವರ್ಷದ ಲಾಸ್ಯ ನಂದಿತಾ ಇದೇ ಮೊದಲ ಬಾರಿಗೆ ಶಾಸಕಿಯಾಗಿ ಆಯ್ಕೆಯಾಗುವ ಮೂಲಕ ತೆಲಂಗಾಣ ವಿಧಾನಸಭೆ ಪ್ರವೇಶಿಸಿದ್ದರು.

ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ನಂದಿತಾ ಅವರನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಲಾಯಿತಾ ದರೂ, ಅವರು ಬದುಕುಳಿದಿಲ್ಲ. ಘಟನೆಯಲ್ಲಿ ನಂದಿತಾ ಅವರ ಕಾರು ಚಾಲಕ ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  


0 Comments

Post a Comment

Post a Comment (0)

Previous Post Next Post