ಉಡುಪಿ: ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಸ್ವಯಂಸೇವಕ, ಹಿರಿಯ ಬಿಜೆಪಿ ನಾಯಕ ಹಾಗೂ ಉಡುಪಿಯ ಹೆಸರಾಂತ ಉದ್ಯಮಿ ಎಂ. ಸೋಮಶೇಖರ ಭಟ್ ಅವರು ಇಂದು ರಾತ್ರಿ (ಫೆ.4- ಭಾನುವಾರ) ನಿಧನರಾದರು.
ಅವರಿಗೆ 90 ವರ್ಷ ವಯಸ್ಸಾಗಿತ್ತು. ಉಡುಪಿ ಜಿಲ್ಲೆಯಲ್ಲಿ ಬಿಜೆಪಿ ಸಂಘಟನೆಯಲ್ಲಿ ಮಹತ್ವದ ಪಾತ್ರ ವಹಿಸಿದ್ದ ಅವರು, ಮಾಜಿ ಪ್ರಧಾನಿ ದಿವಂಗತ ಅಟಲ್ ಬಿಹಾರಿ ವಾಜಪೇಯಿ, ಬಿಜೆಪಿ ವರಿಷ್ಠರಾದ ಲಾಲ್‌ಕೃಷ್ಣ ಆಡ್ವಾಣಿ, ಪ್ರಧಾನಿ ನರೇಂದ್ರ ಮೋದಿ, ಡಾ. ವಿ.ಎಸ್ ಆಚಾರ್ಯ, ಬಿಎಸ್.ಯಡಿಯೂರಪ್ಪ ಮುಂತಾದ ನಾಯಕರ ಜೊತೆ ನಿಕಟ ಸಂಪರ್ಕ ಹೊಂದಿದ್ದರು.
ಅವರು ಪತ್ನಿ, ಇಬ್ಬರು ಪುತ್ರರು, ಒಬ್ಬ ಪುತ್ರಿ ಸೇರಿದಂತೆ ಹಲವಾರು ಅಭಿಮಾನಿಗಳನ್ನು ಅಗಲಿದ್ದಾರೆ.
ಸೋಮಶೇಖರ ಭಟ್ ಅವರ ಪಾರ್ಥಿವ ಶರೀರದ ಅಂತ್ಯ ಸಂಸ್ಕಾರವು ನಾಳೆ (ಫೆ.5) ಬೆಳಗ್ಗೆ 11 ಗಂಟೆಗೆ ನಡೆಯಲಿದೆ. ಬೆಳಗ್ಗೆ 8 ಗಂಟೆಗೆ ಸಾರ್ವಜನಿಕರ ಅಂತಿಮ ದರ್ಶನಕ್ಕೆ ಕಾಡಬೆಟ್ಟುವಿನಲ್ಲಿರುವ ಅವರ ಮನೆಯಲ್ಲಿ ವ್ಯವಸ್ಥೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.
ಗಣ್ಯರ ಸಂತಾಪ:
ಎಂ. ಸೋಮಶೇಖರ ಭಟ್ ಅವರ ನಿಧನಕ್ಕೆ ಉಡುಪಿ ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು, ಸ.ಕ ಸಂಸದ ನಳಿನ್ ಕುಮಾರ್ ಕಟೀಲ್, ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ, ಕೇಂಧ್ರ ಸಚಿವೆ ಶೋಭಾ ಕರಂದ್ಲಾಜೆ, ಶಾಸಕರಾದ ಸುನಿಲ್ ಕುಮಾರ್, ಕಿರಣ್ ಕುಮಾರ್ ಕೊಡ್ಗಿ, ಯಶಪಾಲ್ ಸುವರ್ಣ, ಗುರ್ಮೆ ಸುರೇಶ್ ಶೆಟ್ಟಿ, ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಂದಾಪುರ, ಮಾಜಿ ಶಾಸಕ ಕೆ. ರಘುಪತಿ ಭಟ್ ಮುಂತಾದವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ
Post a Comment