ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಹಿರಿಯ ಪತ್ರಕರ್ತ ಮನೋಹರ ಪ್ರಸಾದ್ ಇನ್ನಿಲ್ಲ

ಹಿರಿಯ ಪತ್ರಕರ್ತ ಮನೋಹರ ಪ್ರಸಾದ್ ಇನ್ನಿಲ್ಲಮಂಗಳೂರು: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಿರಿಯ ಪತ್ರಕರ್ತ ಮನೋಹರ ಪ್ರಸಾದ್ ಅವರು ಇಂದು ಬೆಳಗಿನ ಜಾವ ನಿಧನರಾದರು. ಅವರಿಗೆ 66 ವರ್ಷ ವಯಸ್ಸಾಗಿತ್ತು.


ಇತ್ತೀಚೆಗೆ ಕೆಲವು ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಇಂದು ಬೆಳಗಿನ ಜಾವ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.


ರಂಗಭೂಮಿ, ಸಾಹಿತ್ಯ, ಸಿನಿಮಾ ಹೀಗೆ ಹಲವು ಕ್ಷೇತ್ರಗಳಲ್ಲಿ ಮನೋಹರ ಪ್ರಸಾದ್ ಅವರು ಗುರುತಿಸಿಕೊಂಡಿದ್ದರು.


ಮೂಲತಃ ಕಾರ್ಕಳ ತಾಲೂಕಿನ ಕರ್ವಾಲು ಗ್ರಾಮದ ಮನೋಹರ ಪ್ರಸಾದ್ ಅವರು ಮಂಗಳೂರಿನಲ್ಲಿ ಕಾಲೇಜು ಪದವಿ ಶಿಕ್ಷಣ ಪೂರ್ಣಗೊಳಿಸಿ 'ನವ ಭಾರತ' ಪತ್ರಿಕೆಯಲ್ಲಿ ವೃತ್ತಿಜೀವನ ಆರಂಭಿಸಿದ್ದರು.
ಆಲಿಸಿ: ಇತ್ತೀಚೆಗೆ ಮಂಗಳೂರು ಆಕಾಶವಾಣಿಯಲ್ಲಿ ಪ್ರಸಾರವಾದ ಮನೋಹರ ಪ್ರಸಾದ್ ಅವರ ತುಳು ಕತೆ- ಅಮ್ಮ


ಅನಂತರ ಉದಯವಾಣಿ ಪತ್ರಿಕೆಯ ಮಂಗಳೂರು ವರದಿಗಾರರಾಗಿ ಸೇರಿದ್ದರು. ಬಳಿಕ ಮುಖ್ಯ ವರದಿಗಾರರಾಗಿ, ಬ್ಯೂರೋ ಮುಖ್ಯಸ್ಥರಾಗಿ, ಸಹಾಯಕ ಸಂಪಾದಕರಾಗಿ ಉನ್ನತ ಸ್ಥಾನಕ್ಕೆ ಏರಿದ್ದರು. ಉದಯವಾಣಿ ಪತ್ರಿಕೆಯಲ್ಲೇ 36 ವರ್ಷಗಳ ಸುದೀರ್ಘ ಕಾಲದ ಸೇವೆ ಸಲ್ಲಿಸಿದ ಬಳಿಕ ಎರಡು ವರ್ಷಗಳ ಹಿಂದೆ ನಿವೃತ್ತರಾಗಿದ್ದರು.


ಒಳ್ಳೆಯ ಪತ್ರಕರ್ತರಾಗಿರುವುದರೊಂದಿಗೆ ಪ್ರಸಿದ್ಧ ನಿರೂಪಕರೂ, ನಮ್ಮ ಕುಡ್ಲ ಖಾಸಗಿ ವಾಹಿನಿಯಲ್ಲಿ ವರ್ಷಗಟ್ಟಲೆ ವಾರ್ತಾವಾಚಕರೂ, ಸಂದರ್ಶಕರೂ ಮತ್ತು ಕನ್ನಡ/ ತುಳು ಭಾಷೆಗಳ ಕತೆಗಾರರೂ ಆಗಿದ್ದರು. ಆಕಾಶವಾಣಿಯಲ್ಲೇ ಅವರ 30 ರಷ್ಟು ತುಳು ಕತೆಗಳು ಪ್ರಸಾರವಾಗಿವೆ.


ತಮ್ಮ ಸುದೀರ್ಘ ವೃತ್ತಿಜೀವನದಲ್ಲಿ ಹಲವಾರು ಕಿರಿಯರ ಪತ್ರಕರ್ತರಿಗೆ ಮಾರ್ಗದರ್ಶಕರಾಗಿ ಅವರ ಬೆಳವಣಿಗೆಗೆ ಪ್ರೋತ್ಸಾಹ ನೀಡಿದ್ದರು. ರಾಜ್ಯದ ಮುಂಚೂಣಿ ಪತ್ರಕರ್ತರ ಸಾಲಿಗೆ ಸೇರಿದ್ದ ಅವರು ಕರಾವಳಿ ಪ್ರದೇಶದಲ್ಲಂತೂ ಮನೋಹರ ಪ್ರಸಾದ್ ಅಂದರೆ ಉದಯವಾಣಿ, ಉದಯವಾಣಿ ಅಂದರೆ ಮನೋಹರ ಪ್ರಸಾದ್ ಎಂಬಷ್ಟರ ಮಟ್ಟಿಗೆ ಪ್ರಸಿದ್ಧರಾಗಿದ್ದರು. ಉದಯವಾಣಿಯಿಂದ ನಿವೃತ್ತರಾದ ಬಳಿಕವೂ ಜನಸಾಮಾನ್ಯರ ದೃಷ್ಟಿಯಲ್ಲಿ ಉದಯವಾಣಿ ಅಂದ ಕೂಡಲೇ ಮನೋಹರ ಪ್ರಸಾದ್‌ ನೆನಪಿಗೆ ಬರುತ್ತಿದ್ದರು ಎಂದರೆ ಅತಿಶಯೋಕ್ತಿಯಲ್ಲ.


ಮನೋಹರ ಪ್ರಸಾದ್ ಅವರು ದ.ಕ. ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು. ಅವರ ನಿಧನಕ್ಕೆ ದ.ಕ. ಜಿಲ್ಲಾ ಪತ್ರಕರ್ತರ ಸಂಘ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಸೇರಿದಂತೆ ಪದಾಧಿಕಾರಿಗಳು ಕಂಬನಿ ಮಿಡಿದಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

0 تعليقات

إرسال تعليق

Post a Comment (0)

أحدث أقدم