ಮಂಗಳೂರು: ವಿಧಾನ ಪರಿಷತ್ ಮಾಜಿ ಸದಸ್ಯ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಅವರ ಮಾತೃಶ್ರೀಯವರಾದ ಶ್ರೀಮತಿ ಅಂಬಾ ಸಾವಿತ್ರಿ ಅವರು ಇಂದು (ಮಂಗಳವಾರ) ಬೆಳಗ್ಗೆ 9:30ರ ವೇಳೆಗೆ ಕಾರ್ಕಳ ತಾಲೂಕು ಕೆರ್ವಾಶೆ ಗ್ರಾಮದ ಸ್ವಗೃಹದಲ್ಲಿ ನಿಧನರಾದರು.
ಅವರಿಗೆ 96 ವರ್ಷ ವಯಸ್ಸಾಗಿತ್ತು. ಇತ್ತೀಚೆಗೆ ಸ್ವಲ್ಪ ಸಮಯದಿಂದ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು.
ಹತ್ತು ಮಂದಿ ಮಕ್ಕಳ ತುಂಬು ಸಂಸಾರವನ್ನು ಮುನ್ನಡೆಸಿದ ಅವರಿಗೆ 7 ಮಂದಿ ಗಂಡು ಮಕ್ಕಳು ಹಾಗೂ ಮೂವರು ಹೆಣ್ಣು ಮಕ್ಕಳಿದ್ದಾರೆ.
ಶ್ರೀಮತಿ ಅಂಬಾ ಸಾವಿತ್ರಿ ಅವರ ನಿಧನಕ್ಕೆ ಸಂಸದರಾದ ನಳಿನ್ ಕುಮಾರ್ ಕಟೀಲ್, ಬಿಜೆಪಿ ದಕ್ಷಿಣ ಕನ್ನಡ ಲೋಕಸಭಾ ಅಭ್ಯರ್ಥಿ ಕ್ಯಾಪ್ಟನ್ ಬೃಜೇಶ್ ಚೌಟ ಹಾಗೂ ದ.ಕ ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ ಅವರು ಸಂತಾಪ ವ್ಯಕ್ತಪಡಿಸಿದರು. ಕುಟುಂಬ ವರ್ಗದವರಿಗೆ ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸಿದ್ದಾರೆ.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ
إرسال تعليق