ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಕನ್ನಡದ ಹಿರಿಯ ನಟ ದ್ವಾರಕೀಶ್ ಇನ್ನಿಲ್ಲ

ಕನ್ನಡದ ಹಿರಿಯ ನಟ ದ್ವಾರಕೀಶ್ ಇನ್ನಿಲ್ಲ



ಬೆಂಗಳೂರು: ಕನ್ನಡದ ಹಿರಿಯ ನಟ ದ್ವಾರಕೀಶ್ ಇನ್ನಿಲ್ಲ. ಅವರಿಗೆ 81 ವರ್ಷ ವಯಸ್ಸಾಗಿತ್ತು. ಹೃದಯಾಘಾತದಿಂದ ಅವರು ಇಂದು (ಏ.16, 2024) ನಿಧನರಾದರು ಎಂದು ಕುಟುಂಬ ಮೂಲಗಳು ಮಾಧ್ಯಮಗಳಿಗೆ ತಿಳಿಸಿವೆ.


ಕನ್ನಡ ಚಿತ್ರರಂಗದಲ್ಲಿ ಕುಳ್ಳನೆಂದು ಖ್ಯಾತರಾಗಿದ್ದರು. ಹಾಸ್ಯ ನಟರಾಗಿ ಬಹಳಷ್ಟು ಖ್ಯಾತಿ ಗಳಿಸಿದ್ದರು.


ನಿರ್ದೇಶಕ, ನಿರ್ಮಾಪಕ, ಕನ್ನಡ ಚಿತ್ರರಂಗಕ್ಕೆ ವಿಶೇಷ ರೀತಿಯಲ್ಲಿ ಸೇವೆ ಸೃಷ್ಟಿಸಿದ್ದರು. ಡಾ. ರಾಜ್‌ಕುಮಾರ್, ಡಾ. ವಿಷ್ಣುವರ್ಧನ್‌ ಮುಂತಾದ ನಟ ಸಾರ್ವಭೌಮರ ಜತೆಗೆ ಹಲವು ಚಿತ್ರಗಳಲ್ಲಿ ನಟಿಸಿದ್ದರು.


ಮೈಸೂರು ಜಿಲ್ಲೆ ಹುಣಸೂರಿನಲ್ಲಿ 1942, ಆಗಸ್ಟ್ 19ರಂದು ಶಾಮರಾವ್- ಜಯಮ್ಮ ದಂಪತಿಗಳ ಪುತ್ರರಾಗಿ  ಜನಿಸಿದ್ದರು.


ಮೆಕ್ಯಾನಿಕಲ್ ಎಂಜನಿಯರಿಂಗ್ ಡಿಪ್ಲೋಮಾ ಪದವಿ ಪಡೆದಿದ್ದರು. 1963ರಲ್ಲಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದರು.


ಮೈಸೂರಿನಲ್ಲಿ ದ್ವಾರಕೀಶ್ ವಿದ್ಯಾಭ್ಯಾಸ ಮಾಡಿದ್ದರು. ಶಾರದಾ ವಿಲಾಸ್ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣ ಪಡೆದಿದ್ದರು.


1966ರಲ್ಲಿ ಡಾ ರಾಜ್ ಅಭಿಯನದ ಮೇಯರ್ ಮುತ್ತಣ್ಣ ಸಿನಿಮಾ ನಿರ್ಮಿಸಿದ್ದರು. ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿದ್ದರು.


ಮಂಕುತಿಮ್ಮ, ಭಾಗ್ಯವಂತರು, ಕುಳ್ಳ ಏಜೆಂಟ್ 000, ಮನೆ ಮನೆ ಕಥೆ, ಕುಳ್ಳ ಕುಳ್ಳಿ, ಅದೃಷ್ಟವಂತ, ಇಂದಿನ ರಾಮಾಯಣ, ಮಮತೆಯ ಬಂಧನ, ಮೇಯರ್ ಮುತ್ತಣ್ಣ, ಪ್ರೀತಿ ಮಾಡು ತಮಾಷೆ ನೋಡು ಮುಂತಾದ ಚಿತ್ರಗಳು ಸೂಪರ್ ಹಿಟ್ ಆಗಿದ್ದವು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

0 تعليقات

إرسال تعليق

Post a Comment (0)

أحدث أقدم