ಬೆಳ್ತಂಗಡಿ: ಮಾಜಿ ಶಾಸಕ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಕೆ. ವಸಂತ ಬಂಗೇರ ಅವರು ಇಂದು ಸಂಜೆ 4 ಗಂಟೆ ವೇಳೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 79 ವರ್ಷ ವಯಸ್ಸಾಗಿತ್ತು.
1946ರ ಜನವರಿ 15ರಂದು ಕೇದೆ ಸುಬ್ಬ ಪೂಜಾರಿ ಮತ್ತು ದೇವಕಿ ದಂಪತಿಗಳ ಮಗನಾಗಿ ಜನಿಸಿದ ಅವರು ಐದು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಇತ್ತೀಚೆಗೆ ಸ್ವಲ್ಪ ಕಾಲದಿಂದ ಅವರ ಆರೋಗ್ಯ ತೀವ್ರ ಹದಗೆಟ್ಟಿದ್ದು ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ನಾಳೆ (ಮೇ 9) ಬೆಳಗ್ಗೆ ಅವರ ಪಾರ್ಥಿವ ಶರೀರವನ್ನು ಬೆಳ್ತಂಗಡಿಗೆ ತರುವ ನಿರೀಕ್ಷೆಯಿದೆ. ನಂತರ ಸಾರ್ವಜನಿಕರಿಗೆ ಅಂತಿಮ ದರ್ಶನಕ್ಕೆ ಅವಕಾಶ ಮಾಡಿಕೊಟ್ಟು ಬಳಿಕ ಅಂತ್ಯಕ್ರಿಯೆ ನೆರವೇರಿಸುವುದಾಗಿ ಕುಟುಂಬ ಮೂಲಗಳು ತಿಳಿಸಿವೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ
إرسال تعليق