ಮಂಗಳೂರು: ಶ್ರೀ ಧರ್ಮಸ್ಥಳ ಯಕ್ಷಗಾನ ಮೇಳದಲ್ಲಿ 42 ವರ್ಷ ತಿರುಗಾಟ ನಿರ್ವಹಿಸಿದ ಹಿರಿಯ ಸವ್ಯಸಾಚಿ ಕಲಾವಿದ ಗಂಗಾಧರ ಪುತ್ತೂರು (64 ವರ್ಷ) ನಿಧನಾಗಿದ್ದಾರೆ. ನಿನ್ನೆ (ಮೇ 1) ಕೋಟ ಗಾಂಧಿ ಮೈದಾನದಲ್ಲಿ ಧರ್ಮಸ್ಥಳ ಕ್ಷೇತ್ರ ಮಹಾತ್ಮೆಯ ಕುಕ್ಕಿತ್ತಾಯನ ವೇಷ ನಿರ್ವಹಿಸಿ, ಚೌಕಿಗೆ ಮರಳಿ ಕಿರೀಟ ಆಭರಣಗಳನ್ನು ತೆಗೆದಿಟ್ಟು ಮುಖದ ಬಣ್ಣ ತೆಗೆಯುತ್ತಿದ್ದ ಹಾಗೆ ತೀವ್ರ ಹೃದಯಾಘಾತದಿಂದ ನಿಧನರಾದರು.
ಅವರು ಯಾವುದೇ ಪಾತ್ರ ನೀಡಿದರೂ ಸಮರ್ಥ ನಿರ್ವಹಿಸುತ್ತಿದ್ದ ಹಿರಿಯ ಸವ್ಯಸಾಚಿ ಕಲಾವಿದರಾಗಿ ದ್ದರು. ರಂಗ/ಚೌಕಿಯಿಂದಲೇ ನಿರ್ಗಮಿಸಿದ ಹಿರಿಯ ಪುಣ್ಯಾತ್ಮರ ಸಾಲಿಗೆ ಗಂಗಾಧರರೂ ಸೇರಿದಂತಾಗಿದೆ.
ಪುತ್ತೂರು ತಾಲೂಕಿನ ಸೇಡಿಯಾಪು ಗ್ರಾಮದಲ್ಲಿ ನಾರಾಯಣ ಮಯ್ಯ-ಲಕ್ಷ್ಮಿ ದಂಪತಿಯ ಪುತ್ರನಾಗಿ 1964ರಲ್ಲಿ ಅವರು ಜನಿಸಿದ್ದರು. ಏಳನೇ ತರಗತಿಯ ವರೆಗೆ ವಿದ್ಯಾಭ್ಯಾಸ ಪಡೆದು ನಂತರ ಕೆ. ಗೋವಿಂದ ಭಟ್, ಕರ್ಗಲ್ಲು ವಿಶ್ವೇಶ್ವರ ಭಟ್ ಅವರಲ್ಲಿ ನಾಟ್ಯಾಭ್ಯಾಸ ಕಲಿತರು. 18ನೇ ವಯಸ್ಸಿನಿಂದ ಮೇಳದಲ್ಲಿ ತಿರುಗಾಟ ಆರಂಭಿಸಿದ ಅವರು, ಸ್ತ್ರೀ ವೇಷ, ಪುಂಡು ವೇಷ,, ರಾಜ ವೇಷಗಳನ್ನು ನಿರ್ವಹಿಸುವಲ್ಲಿ ಪರಿಣತರಾಗಿದ್ದರು. ಹಾಸ್ಯದ ಸ್ತ್ರೀ ಪಾತ್ರಗಳನ್ನು ನಿರ್ವಹಿಸುವ ಪ್ರೌಢಿಮೆಯೂ ಅವರಲ್ಲಿತ್ತು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ
إرسال تعليق