ಮಂಗಳೂರು: ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಹಾಗೂ ಸಹಕಾರಿ ಕ್ಷೇತ್ರಗಳಲ್ಲಿ ಅಪಾರ ಸೇವೆ ಸಲ್ಲಿಸಿರುವ ಕೂಡೂರು ನಿವಾಸಿ ಎಲ್.ಎನ್. ಕೂಡೂರು ಅವರು ಶನಿವಾರ ತಡರಾತ್ರಿ (ಜೂ.29) ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನರಾದರು. ಅವರಿಗೆ 67 ವರ್ಷ ವಯಸ್ಸಾಗಿತ್ತು.
ಸಹಕಾರಿ ಕ್ಷೇತ್ರದ ಮುಂಚೂಣಿ ಸಂಸ್ಥೆ ಕ್ಯಾಂಪ್ಕೋದ ಮಾಜಿ ಅಧ್ಯಕ್ಷರಾಗಿ, ವಿಟ್ಲ ಗ್ರಾಮೀಣ ಸಹಹಕಾರಿ ಬ್ಯಾಂಕ್ ಮಾಜಿ ಅಧ್ಯಕ್ಷರಾಗಿ, ಶ್ರೀರಾಮಚಂದ್ರಾಪುರ ಮಠದ ಹೊಸನಗರ ಚಂದ್ರಮೌಳೀಶ್ವರ ದೇವಸ್ಥಾನ ಜೀರ್ಣೋದ್ಧಾರ ಸಮಿತಿಯ ಮಾಜಿ ಅಧ್ಯಕ್ಷರಾಗಿ ಅವರು ಸೇವೆ ಸಲ್ಲಿಸಿದ್ದರು.
ವಿಠಲ ಎಜುಕೇಶನ್ ಸೊಸೈಟಿಯ ಸಂಚಾಲಕರು ಹಾಗೂ ವಿಠ್ಠಲ ಜೆ.ಸಿ ಎಜುಕೇಶನ್ ಸೊಸೈಟಿಯ ಅಧ್ಯಕ್ಷರೂ ಆಗಿದ್ದರು. ವಿಟ್ಲ ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾಗಿ, ದೇಗುಲದ ಬ್ರಹ್ಮಕಲಶೋತ್ಸವದ ರೂವಾರಿಯಾಗಿ ಅಪಾರ ಮೆಚ್ಚುಗೆ ಗಳಿಸಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ
Post a Comment