ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಸಂಸದ ಕೋಟ ಶ್ರೀನಿವಾಸ ಪೂಜಾರಿಗೆ ಮಾತೃವಿಯೋಗ

ಸಂಸದ ಕೋಟ ಶ್ರೀನಿವಾಸ ಪೂಜಾರಿಗೆ ಮಾತೃವಿಯೋಗ



ಕೋಟ: ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿಯವರ ತಾಯಿ, ಕೋಟದ ಕೋಟತಟ್ಟು ನಿವಾಸಿ ಲಚ್ಚಿ ಪೂಜಾರ್‍ತಿ (97) ವಯೋಸಹಜ ಅಸೌಖ್ಯದಿಂದ ಜೂ.30ರಂದು ನಿಧನ ಹೊಂದಿದರು.


ಮೃತರು ಪುತ್ರ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಪೂಜಾರಿಯವರು ತನ್ನ ಯಶಸ್ಸಿನಲ್ಲಿ ತಾಯಿಯ ಪಾತ್ರ ಮಹತ್ವದ್ದು ಎಂದು ಯಾವಾಗಲೂ ನೆನಪಿಸಿಕೊಳ್ಳುತ್ತಿದ್ದರು.


ಗಣ್ಯರ ಸಂತಾಪ:

ಇವರ ಅಗಲುವಿಕೆಗೆ ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ, ಉಡುಪಿ ಶಾಸಕ ಯಶಪಾಲ್ ಸುವರ್ಣ, ಕಾಪು ಶಾಸಕ  ಗುರ್ಮೆ ಸುರೇಶ್ ಶೆಟ್ಟಿ, ಬಂದೂರು ಶಾಸಕ ಗುರುರಾಜ್ ಗಂಟಿಹೊಳೆ, ಕಾರ್ಕಳ ಶಾಸಕ ಸುನೀಲ್ ಕುಮಾರ್, ಉದ್ಯಮಿ ಆನಂದ ಸಿ.ಕುಂದರ್ ಸಹಿತ ರಾಜ್ಯ, ರಾಷ್ಟ್ರ ಮಟ್ಟದ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

0 تعليقات

إرسال تعليق

Post a Comment (0)

أحدث أقدم