ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಖ್ಯಾತ ನಿರೂಪಕಿ, ಮಧುರ ಧ್ವನಿಯ ಒಡತಿ, ಕಲಾವಿದೆ ಅಪರ್ಣಾ ಇನ್ನಿಲ್ಲ

ಖ್ಯಾತ ನಿರೂಪಕಿ, ಮಧುರ ಧ್ವನಿಯ ಒಡತಿ, ಕಲಾವಿದೆ ಅಪರ್ಣಾ ಇನ್ನಿಲ್ಲ



ಬೆಂಗಳೂರು: ಖ್ಯಾತ ನಿರೂಪಕಿ, ಅಪ್ಪಟ ಕನ್ನಡತಿ, ಚಿತ್ರನಟಿ ಅಪರ್ಣಾ ಅವರು ಅನಾರೋಗ್ಯದಿಂದ ನಿಧನರಾಗಿದ್ದಾರೆ. ಅಪರ್ಣಾ ಅವರು ಬೆಂಗಳೂರಿನ ಬನಶಂಕರಿಯಲ್ಲಿರುವ ತನ್ನ ನಿವಾಸದಲ್ಲಿ ಇಂದು ಕೊನೆಯುಸಿರೆಳೆದರು. ಅವರಿಗೆ 57 ವರ್ಷ ವಯಸ್ಸಾಗಿತ್ತು.


ದೂರದರ್ಶನ ಚಂದನದಲ್ಲಿ ನಿರೂಪಕಿಯಾಗಿದ್ದ ಅವರು ಪುಟ್ಟಣ್ಣ ಕಣಗಾಲ್ ಅವರ ಮಸಣದ ಹೂವು ಚಿತ್ರದಲ್ಲಿ ಮನೋಜ್ಞ ಅಭಿನಯದ ಮೂಲಕ ಕನ್ನಡಿಗರ ಗಮನ ಸೆಳೆದಿದ್ದರು.


ನಂತರ ಇನ್ಸ್‌ಪೆಕ್ಟರ್ ವಿಕ್ರಮ್ ಸೇರಿದಂತೆ ಹಲವು ಚಿತ್ರಗಳಲ್ಲಿ ನಟಸಿ ಸೈ ಎನಿಸಿಕೊಂಡಿದ್ದಾರೆ. ಸಿನಿಮಾಗಿಂತಲೂ ಹೆಚ್ಚು ನಿರೂಪಕಿಯಾಗಿ ಅಪರ್ಣಾ ಎಲ್ಲರ ಮನಗೆದ್ದಿದ್ದರು. ಸ್ಪಷ್ಟ ಕನ್ನಡದ ಮೂಲಕ ನಿರೂಪಣೆ ಮಾಡುವ ಮೂಲಕ ಭಾರಿ ಜನಪ್ರಿಯತೆ ಪಡೆದಿದ್ದರು.


ನಂತರ ಅವರು ನಿರೂಪಕಿಯಾಗಿಯೇ ಕನ್ನಡಿಗರ ಮನ ಗೆದ್ದಿದ್ದರು. ಬಿಗ್ ಬಾಸ್ ಶೋನಲ್ಲಿ ಭಾಗವಹಿಸಿದ್ದರು. ಸೃಜನ್ ಲೋಕೇಶ್ ಅವರ ಮಜಾ ಟಾಕೀಸ್ ವನ್ ಆ್ಯಂಡ್ ಓನ್ಲಿ ವರಲಕ್ಷ್ಮೀ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದರು. ಬೆಂಗಳೂರು ಮೆಟ್ರೋ, ಕೆಎಸ್ಸಾರ್ಟಿಸಿಯಲ್ಲಿ ಅವರ ಧ್ವನಿಯನ್ನು ಈಗಲೂ ಕೇಳಬಹುದಾಗಿದೆ.


ಮುಂದಿನ ನಿಲ್ದಾಣ ನಾಡಪ್ರಭು ಕೆಂಪೇಗೌಡ ಬಸ್ ನಿಲ್ದಾಣ, ಬಾಗಿಲುಗಳು ಬಲಕ್ಕೆ ತೆರೆಯಲಿವೆ. ರೈಲು ಹತ್ತುವ ಮತ್ತು ಇಳಿಯುವ ಮುನ್ನ ಅಂತರವನ್ನು ಗಮನಿಸಿ.. ಮೆಟ್ರೋದಲ್ಲಿ ಕೇಳಿ ಬರುತ್ತಿದ್ದ ಈ ಧ್ವನಿಯೊಡತಿ ಇನ್ನು ನೆನಪು ಮಾತ್ರ..


ಅಪರ್ಣಾ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ. ಕನ್ನಡ ಚಿತ್ರ ರಂಗದ ಅನೇಕ ನಟ-ನಟಿಯರು ಅಪರ್ಣಾ ನಿಧನಕ್ಕೆ ಕಂಬನಿ ಮಿಡಿದಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

0 Comments

Post a Comment

Post a Comment (0)

Previous Post Next Post