ಬೆಳ್ತಂಗಡಿ: ತಾಲೂಕಿನ ಹಿರಿಯ ಸಾಹಿತಿ, ಉಜಿರೆ ಎಸ್ ಡಿ ಎಂ ಕಾಲೇಜಿನ ನಿವೃತ್ತ ಕನ್ನಡ ಪ್ರಾಧ್ಯಾಪಕ ಪ್ರೊ. ಎನ್ ಜಿ ಪಟವರ್ಧನ್ ಅವರು ಅಲ್ಪ ಕಾಲದ ಅಸೌಖ್ಯದಿಂದಾಗಿ ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ಇಂದು (ಜು.1) ನಿಧನರಾದರು.
ಮುಂಡಾಜೆ ಗ್ರಾಮದ ಮೂಲಾರು ಎಂಬಲ್ಲಿ ಮೂಲ ಮನೆ ಹೊಂದಿದ್ದ ಅವರು ಕಳೆದ ಅನೇಕ ವರ್ಷಗಳಿಂದ ಉಜಿರೆಯಲ್ಲಿ ನೆಲೆಸಿದ್ದರು.
ಚಿತ್ಪಾವನ ಸಮಾಜದ ಹಿರಿಯರೂ ಆಗಿದ್ದ ಅವರು ಹಲವು ಕಥೆ, ಕವನ, ವಿಮರ್ಶೆ ರಚನಾಕರ್ತರಾಗಿದ್ದರು. ಅವರ ಹಲವು ಕೃತಿಗಳು ಸಾಹಿತ್ಯ ಲೋಕಕ್ಕೆ ಸಮರ್ಪಿತವಾಗಿತ್ತು.
ಉತ್ತಮ ಶೋತೃ ಹಾಗೂ ಸಾಹಿತ್ಯ ವಿಷಯಾಸಕ್ತಿ ಹೊಂದಿದ್ದ ಅವರು ಹಲವಾರು ಯುವ ಬರಹಗಾರರ ಬರಹಗಳ ಬಗ್ಗೆ ವಿಮರ್ಶೆ ಬರೆದು ಆ ಮೂಲಕ ಅವರನ್ನು ಪ್ರೋತ್ಸಾಹಿಸುತ್ತಿದ್ದರು. ಬೆಳ್ತಂಗಡಿ ತಾಲೂಕಿನ ಕನ್ನಡ ಸಾಹಿತ್ಯ ಪರಿಷತ್ತು ಆಯೋಜಿಸಿದ್ದ ತಾಲೂಕು ಮಟ್ಟದ ಸಮ್ಮೇಳನದ ಅಧ್ಯಕ್ಷರೂ ಆಗಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ
إرسال تعليق