ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಕುಂಬ್ಳೆ ಶ್ರೀಧರ ರಾವ್ ನಿಧನಕ್ಕೆ ಡಿ ವೀರೇಂದ್ರ ಹೆಗ್ಗಡೆ ಸಂತಾಪ

ಕುಂಬ್ಳೆ ಶ್ರೀಧರ ರಾವ್ ನಿಧನಕ್ಕೆ ಡಿ ವೀರೇಂದ್ರ ಹೆಗ್ಗಡೆ ಸಂತಾಪ


 ಧರ್ಮಸ್ಥಳ:  ಖ್ಯಾತ ಯಕ್ಷಗಾನ ಕಲಾವಿದ ಕುಂಬ್ಳೆ ಶ್ರೀಧರ ರಾವ್ ಅವರ ನಿಧನಕ್ಕೆ ಧರ್ಮಸ್ಥಳ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ತೀವ್ರ ಸಂತಾಪ ವವ್ಯಕ್ತಪಡಿಸಿದ್ದಾರೆ.

ಮಾಧ್ಯಮಗಳಿಗೆ ಬಿಡುಗಡೆ ಮಾಡಿರುವ ಪ್ರಟಣೆಯಲ್ಲಿ ಅವರು, ನಮ್ಮ  ಶ್ರೀ ಮಂಜುನಾಥೇಶ್ವರ ಕೃಪಾಪೋಷಿತ ಯಕ್ಷಗಾನ ಮಂಡಳಿಯ ಹಿರಿಯ ಕಲಾವಿದ ಕುಂಬ್ಳೆ ಶ್ರೀಧರ ರಾವ್ ನಿಧನರಾದ ಸುದ್ದಿ ತಿಳಿದು ದುಃಖವಾಯಿತು. ಆತ ನಾನು ಮೆಚ್ಚಿದ ಶ್ರೇಷ್ಠ ಕಲಾವಿದರಾಗಿದ್ದು, ಕೇರಳ ಮೂಲದವರಾದರೂ, ಸ್ಪಷ್ಟ ಉಚ್ಛಾರ, ಭಾಷಾಶುದ್ಧಿ ಹಾಗೂ ಪಾತ್ರಗಳಿಗೆ ಜೀವತುಂಬುವ ಕಲೆ ಅವರಲ್ಲಿ ಅದ್ಭುತವಾಗಿತ್ತು. ನೃತ್ಯ, ಅಭಿನಯ ಮತ್ತು ಉತ್ತಮ ವಾಕ್ಪಟುತ್ವದೊಂದಿಗೆ ಅವರು ಕಲಾಭಿಮಾನಿಗಳ ಮುಕ್ತ ಪ್ರಶಂಸೆಗೆ ಪಾತ್ರರಾಗಿದ್ದರು ಎಂದು ಸ್ಮರಿಸಿಕೊಂಡಿದ್ದಾರೆ.

ಅವರ ನಿಧನದಿಂದ ಶ್ರೇಷ್ಠ ಯಕ್ಷಗಾನ ಕಲಾವಿದರೊಬ್ಬರನ್ನು ಕಳೆದುಕೊಂಡಂತಾಗಿದೆ. ಅವರ ಆತ್ಮಕ್ಕೆ ಚಿರಶಾಂತಿಯನ್ನು ಕೋರುತ್ತೇನೆ. ಅವರ ಅಗಲುವಿಕೆಯಿಂದ ಕುಟುಂಬದವರಿಗೆ ಉಂಟಾದ ದುಃಖವನ್ನು ಸಹಿಸುವ ಶಕ್ಕಿ-ತಾಳ್ಮೆಯನ್ನಿತ್ತು, ಶ್ರೀ ಮಂಜುನಾಥ ಸ್ವಾಮಿ ಹರಸಲೆಂದು ಪ್ರಾರ್ಥಿಸುತ್ತೇನೆ ಎಂದು ಹೆಗ್ಗಡೆಯವರು ತಿಳಿಸಿದ್ದಾರೆ,


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  



0 تعليقات

إرسال تعليق

Post a Comment (0)

أحدث أقدم