ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಹಿರಿಯ ಪತ್ರಕರ್ತ ವಸಂತ್ ನಾಡಿಗೇರ್ ಇನ್ನಿಲ್ಲ

ಹಿರಿಯ ಪತ್ರಕರ್ತ ವಸಂತ್ ನಾಡಿಗೇರ್ ಇನ್ನಿಲ್ಲ




ಬೆಂಗಳೂರು: ನಾಡಿನ ಹಿರಿಯ ಪತ್ರಕರ್ತ, ಸಂಯುಕ್ತ ಕರ್ನಾಟಕದ ಸಂಪಾದಕರಾದ ವಸಂತ ನಾಡಿಗೇರ ಅವರು (ಸೆ.9) ಸೋಮವಾರ ಬೆಳಗಿನ ಜಾವ 3.13ಕ್ಕೆ ನಿಧನರಾದರು. ಅವರಿಗೆ 59 ವರ್ಷ ವಯಸ್ಸಾಗಿತ್ತು. ಅವರು ಪತ್ನಿ, ಪುತ್ರ, ಪುತ್ರಿ ಸೇರಿದಂತೆ ಅಪಾರ ಬಂಧುಗಳನ್ನು ಅಗಲಿದ್ದಾರೆ.


ಮೂಲತಃ ಹಾವೇರಿ ಜಿಲ್ಲೆಯ ರಾಣಿಬೆನ್ನೂರಿನವರಾದ ನಾಡಿಗೇರ್ ಅವರು ಸಂಯುಕ್ತ ಕರ್ನಾಟಕ, ವಿಜಯ ಕರ್ನಾಟಕ, ವಿಶ್ವವಾಣಿ ಪತ್ರಿಕೆಗಳಲ್ಲಿ ಸೇವೆ ಸಲ್ಲಿಸಿದ್ದರು. ವಿಜಯ ಕರ್ನಾಟಕದಲ್ಲಿ ಅವರು ಶೀರ್ಷಿಕೆಗಳನ್ನು ಕೊಡುವುದರಲ್ಲಿ ಹಲವು ವಿನೂತನ ಪ್ರಯೋಗಗಳನ್ನು ಕೈಗೊಂಡು, ಕನ್ನಡ ಪತ್ರಿಕೋದ್ಯಮಕ್ಕೆ ಹೊಸ ಆಯಾಮ ನೀಡಿದ್ದರು. ಲತಾ ಮಂಗೇಶ್ಕರ್ ಜೀವನ ಚರಿತ್ರೆಯನ್ನು ಕನ್ನಡದಲ್ಲಿ ಬರೆದಿದ್ದಾರೆ.


ಕನ್ನಡ ಪತ್ರಿಕೋದ್ಯಮಲ್ಲಿ ನೂರಾರು ಉಪ ಸಂಪಾದಕರು ಹಾಗೂ ವರದಿಗಾರರಿಗೆ ಮಾರ್ಗದರ್ಶನವನ್ನು ಅವರು ಮಾಡಿದ್ದಾರೆ. ವಿಜಯ ಕರ್ನಾಟಕದ ಸಂಪಾದಕೀಯ ವಿಭಾಗದ ಯಶಸ್ಸಿನಲ್ಲಿ ಅವರ ಪಾಲು ಸಾಕಷ್ಟಿದೆ. ಹಾಗೆಯೇ ಪತ್ರಿಕೆಯ ಭಾಷೆ ಸುಧಾರಣೆ ಜತೆಗೆ, ಅಚ್ಚು ಕಟ್ಟಾಗಿ ಮೂಡಿಬರಲು ಕೂಡ ಕಾರಣರಾಗಿದ್ದರು. ಒಬ್ಬ ಸುದ್ದಿ ಸಂಪಾದಕ ಹೇಗಿರಬೇಕು ಎನ್ನುವುದಕ್ಕೆ ವಸಂತ್‌ ನಾಡಿಗೇರ್‌ ಮಾದರಿಯಾಗಿದ್ದರು.


ಅತ್ಯಂತ ಸಜ್ಜನ, ಸುದ್ದಿಮನೆಯೊಳಗೆ ಪತ್ರಿಕೆ ರೂಪಿಸುವಲ್ಲಿ ಮಹತ್ವದ ಪಾತ್ರ ಇವರದು. ಡೆಸ್ಕ್‌ನಲ್ಲಿ ಕೆಲಸ ಮಾಡುವವರು ಹೊರಗೆ ಗುರುತಿಸಲ್ಪಡುವುದು ಕಡಿಮೆ. ಅಂಥ ಎಲೆಮರೆಯ ಕಾಯಿ ಇವರು.

ವಸಂತ ನಾಡಿಗೇರ ಅವರ ವೃತ್ತಿ ಜೀವನದ ಹಿರಿತನದ ಸೇವೆ ಗುರುತಿಸಿ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘವು ಮೈಸೂರಿನಲ್ಲಿ ನಡೆದ ಕೆಯುಡಬ್ಲೂಜೆ ದತ್ತಿನಿಧಿ ಪ್ರಶಸ್ತಿಯನ್ನು ಪ್ರದಾನ ಮಾಡಿತ್ತು. ಜೊತೆಗೆ ನಾಡಿಗೇರ ಅವರು ಹಲವು ಪ್ರಶಸ್ತಿಗಳಿಗೆ ಭಾಜನರಾಗಿದ್ದರು.


ಕೆಯುಡಬ್ಲೂಜೆ ಸಂತಾಪ:

ಹಿರಿಯ ಪತ್ರಕರ್ತರಾದ ವಸಂತ ನಾಡಿಗೇರ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ,  ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಸೇರಿದಂತೆ ಮಾಧ್ಯಮ ಕ್ಷೇತ್ರದ ಅನೇಕ ಗಣ್ಯರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 


0 تعليقات

إرسال تعليق

Post a Comment (0)

أحدث أقدم