ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಯಕ್ಷಗಾನದ ಹಾಸ್ಯ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ ನಿಧನ

ಯಕ್ಷಗಾನದ ಹಾಸ್ಯ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ ನಿಧನ



ಮಂಗಳೂರು: ಯಕ್ಷಗಾನದ ಹಾಸ್ಯ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ ಇಂದು ಬೆಳಗಿನ ಜಾವ 4 ಗಂಟೆ ಸುಮಾರಿಗೆ ಹೃದಯಸ್ಥಂಭನದಿಂದ ನಿಧನರಾದರು.


ಚಂದ್ರಶೇಖರ ಧರ್ಮಸ್ಥಳ ಅವರ ನೇತೃತ್ವದ ತಂಡದಲ್ಲಿ ಇಂದಿನಿಂದ ಬೆಂಗಳೂರಿನಲ್ಲಿ ನಡೆಯಬೇಕಿದ್ದ ಯಕ್ಷಗಾನ ಕಾರ್ಯಕ್ರಮದಲ್ಲಿ ಭಾಗವಹಿಸಲು ಭಾನುವಾರ ಬೆಳಗ್ಗೆ ಬೆಂಗಳೂರಿನ ಆರ್ ಕೆ ಭಟ್ಟರ ಮನೆಯಲ್ಲಿ ಬಂದು ಇಳಿದ ತಂಡದಲ್ಲಿ ಜಯರಾಮ ಆಚಾರ್ಯರೂ ಇದ್ದರು.


ಬೆಳಗಿನ ಜಾವ ತೀವ್ರತರವಾದ ಹೃದಯ ಸ್ತಂಭನವಾದಾಗ ಜೊತೆ ಕಲಾವಿದರು ಆಸ್ಪತ್ರೆಗೆ ಸೇರಿಸಿದರೂ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದರು. ಈಗ ಸ್ಥಳೀಯ ಆಸ್ಪತ್ರೆಯಲ್ಲಿರುವ ಮೃತ ದೇಹವನ್ನು ನಂತರ ಆರ್.ಕೆ ಭಟ್ಟರ ಮನೆಗೆ ಒಯ್ದು ಅಂತಿಮ ದರ್ಶನಕ್ಕೆ ಇರಿಸಲಾಗುವುದು. ಆಮೇಲೆ ಆಂಬುಲೆನ್ಸ್ ಮೂಲಕ ಊರಿಗೆ ಕೊಂಡೊಯ್ಯಲಾಗುವುದು ಎಂದು ಭಾಗವತರಾದ ಗಿರೀಶ್ ರೈ ಕಕ್ಕೆಪದವು ತಿಳಿಸಿದ್ದಾರೆ.

ಆಚಾರ್ಯರು ಕಟೀಲು, ಹೊಸನಗರ ಮೊದಲಾದ ದಿಗ್ಗಜ ಮೇಳಗಳಲ್ಲಿ ಅವರು ಕೆಲಸ ಮಾಡಿದ್ದು ಹನುಮಗಿರಿ ಮೇಳದಲ್ಲಿ ಈ ವರ್ಷವೇ ನಿವೃತ್ತರಾಗಿ ಆ ಮೇಳದಲ್ಲಿಯೇ ಅವರು ತಮ್ಮ 67 ವರ್ಷಗಳ ಜೀವನಯಾತ್ರೆ ಕೊನೆಗೊಳಿಸಿದರು. 


ಪತ್ನಿ ಶ್ಯಾಮಲ ಗೃಹಿಣಿ. ಮಗ ವರುಣ್ ಮತ್ತು ಮಗಳು ವರ್ಷಾ ಇಬ್ಬರೂ ಎಂಜಿನಿಯರಿಂಗ್ ಓದುತ್ತಿದ್ದಾರೆ.


ಸರಳ, ಸಜ್ಜನ, ನಿಗರ್ವಿ, ವಿನಯವಂತ ಹಾಸ್ಯಗಾರರು. ಇವರು ಜನಿಸಿದ್ದು 12-10-1957ರಂದು. ತಂದೆ ಬಂಟ್ವಾಳ ಗಣಪತಿ ಆಚಾರ್ಯ, ತಾಯಿ ಶ್ರೀಮತಿ ಭವಾನಿ ಅಮ್ಮ. ಗಣಪತಿ ಆಚಾರ್ಯರು ತನ್ನ ಕುಲವೃತ್ತಿಯಾದ ಚಿನ್ನದ ಕೆಲಸ ಮಾಡುವುದು ಮಾತ್ರವಲ್ಲದೆ ಆ ಕಾಲದ ಉತ್ತಮ ಕಲಾವಿದರಾಗಿದ್ದರು. ಹಾಸ್ಯಗಾರರಾಗಿ ಕಲಾಸೇವೆಯನ್ನು ಮಾಡುತ್ತಿದ್ದವರು. ಬಳ್ಳಂಬೆಟ್ಟು, ಹೆರ್ಗ, ಅಮ್ಟಾಡಿ, ಸೊರ್ನಾಡು ಮೇಳಗಳಲ್ಲಿ ತಿರುಗಾಟ ನಡೆಸಿದ್ದರು.


ತೆಂಕುತಿಟ್ಟು ಯಕ್ಷಗಾನದ ಹೆಸರಾಂತ ವಿದೂಷಕ ಪಾತ್ರಧಾರಿ ಜಯರಾಮ ಆಚಾರ್ಯರು ಕಲಿತದ್ದು ಬಂಟ್ವಾಳ ಸರಕಾರೀ ಹಿರಿಯ ಪ್ರಾಥಮಿಕ ಶಾಲೆಯಲ್ಲಿ (ಬೋರ್ಡ್ ಶಾಲೆ). ಶಾಲಾ ದಿನಗಳಲ್ಲಿ ತೀರ್ಥರೂಪರಿಂದ ತನ್ನ ಕುಲಕಸುಬನ್ನು ಅಭ್ಯಾಸ ಮಾಡಿದ್ದರು. ಎಳವೆಯಲ್ಲೇ ಇವರಿಗೆ ಯಕ್ಷಗಾನಾಸಕ್ತಿ. ಬಂಟ್ವಾಳ ಆಸುಪಾಸಿನಲ್ಲಿ ನಡೆಯುತ್ತಿದ್ದ ಆಟ ತಾಳಮದ್ದಳೆ ಪ್ರದರ್ಶನಗಳನ್ನು ತಪ್ಪದೆ ನೋಡುತ್ತಿದ್ದರು. ತಂದೆಯವರ ಜತೆಯೂ ಯಕ್ಷಗಾನ ಪ್ರದರ್ಶನಗಳಿಗೆ ಹೋಗುತ್ತಿದ್ದರು. ತಂದೆಯವರ ಜತೆಯಾಗಿಯೇ ಅಮ್ಟಾಡಿ, ಸೊರ್ನಾಡು ಮೇಳಗಳಲ್ಲಿ ತಿರುಗಾಟವನ್ನು ನಡೆಸಿ ವೇಷವನ್ನೂ ಮಾಡಿದರು.


ಹೀಗೆ ಯಕ್ಷಗಾನ ಪ್ರದರ್ಶನಗಳನ್ನು ಶ್ರದ್ಧೆಯಿಂದ ನೋಡಿದ ಪರಿಣಾಮದಿಂದ ನಾನಿಂದು ಕಲಾವಿದನಾದೆ. ಪ್ರಸಂಗ ಮಾಹಿತಿ, ವೇಷಗಳ ಸ್ವಭಾವವೇನು ಎಂಬುದನ್ನು ತಿಳಿಯಲು ನನಗೆ ಅನುಕೂಲವಾಯಿತು ಎಂದು ಜಯರಾಮ ಆಚಾರ್ಯರು ಹೇಳುತ್ತಾ ತನ್ನ ಬಾಲ್ಯದ ದಿನಗಳನ್ನು ನೆನಪಿಸುತ್ತಿದ್ರರು. ಶಾಸ್ತ್ರೀಯವಾಗಿ ನಾಟ್ಯಾಭ್ಯಾಸ ಮಾಡುವ ಮೊದಲೇ ಬಂಟ್ವಾಳ ಜಯರಾಮ ಆಚಾರ್ಯರು ಅಮ್ಟಾಡಿ, ಸೊರ್ನಾಡು, ಸುಂಕದಕಟ್ಟೆ, ಕಟೀಲು ಮೇಳಗಳಲ್ಲಿ 4 ತಿರುಗಾಟ ನಡೆಸಿದ್ದರು. ಇದು ಇವರ ಪ್ರತಿಭೆಗೆ ಸಾಕ್ಷಿ




ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

0 Comments

Post a Comment

Post a Comment (0)

Previous Post Next Post