ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಬೆಳ್ತಂಗಡಿ: ನದಿಯಲ್ಲಿ ಮುಳುಗಿ ಮೂವರು ವಿದ್ಯಾರ್ಥಿಗಳು ನೀರುಪಾಲು

ಬೆಳ್ತಂಗಡಿ: ನದಿಯಲ್ಲಿ ಮುಳುಗಿ ಮೂವರು ವಿದ್ಯಾರ್ಥಿಗಳು ನೀರುಪಾಲು



ಬೆಳ್ತಂಗಡಿ: ಹಬ್ಬಕ್ಕೆಂದು ಬಂದಿದ್ದ ಯುವಕರು ಊಟದ ಬಳಿಕ ನದಿಗೆ ಸ್ನಾನಕ್ಕೆಂದು ಹೋದ ವೇಳೆ ನೀರುಪಾಲಾದ ಘಟನೆ ಬೆಳ್ತಂಗಡಿ ತಾಲೂಕಿನ ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯ ನಡ್ತಿಕಲ್ಲು ಎಂಬಲ್ಲಿ‌ ಇಂದು ಸಂಜೆ ನಡೆದಿದೆ.


ಬೆಳ್ತಂಗಡಿ ತಾಲೂಕಿನ ಮೂಡುಕೋಡಿ ಗ್ರಾಮದ ವಾಲ್ಟರ್ ಎಂಬವರ ಮನೆಗೆ ವೇಣೂರು ಚರ್ಚ್ ನ ವಾರ್ಷಿಕ ಹಬ್ಬಕ್ಕೆಂದು ಬಂದಿದ್ದ ಕುಪ್ಪಪೆದವು ನಿವಾಸಿ ಲಾರೆನ್ಸ್ (20), ಬೆಳ್ತಂಗಡಿ ತಾಲೂಕಿನ ಪಾರೆಂಕಿ ಗ್ರಾಮದ ಪುಂಜಾಲಕಟ್ಟೆ ಬಸವನಗುಡಿ ನಿವಾಸಿ ಸೂರಜ್ (19), ಬಂಟ್ವಾಳ ಗ್ರಾಮದ ವಗ್ಗದ ಜೈಸನ್ (19) ಎಂಬವರು ನ.27 ರಂದು ಊಟ ಮುಗಿಸಿ ಮೂಡುಕೋಡಿ ಗ್ರಾಮದ ನಡ್ತಿಕಲ್ಲು ಬರ್ಕಜೆ ಡ್ಯಾಂ ಬಳಿಯ ಎರುಗುಂಡಿ ಬಳಿ ಸ್ನಾನ ಮಾಡಲು ನದಿಗೆ ಇಳಿದಿದ್ದು ಈ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ಮೂವರು ಯುವಕರು ನೀರುಪಾಲಾಗಿದ್ದಾರೆ.


ಮೂವರ ಮೃತದೇಹ ನೀರಿನಿಂದ ಹೊರತೆಗೆಯಲಾಗಿದೆ. ಈ ಬಗ್ಗೆ ವೇಣೂರು ಪೊಲೀಸರು ಘಟನಾ ಸ್ಥಳಕ್ಕೆ ಹೋಗಿ ಪರಿಶೀಲನೆ ನಡೆಸುತ್ತಿದ್ದಾರೆ. ಯುವಕರು ಮಂಗಳೂರಿನ ನರ್ಸಿಂಗ್ ಕಲಿಯುತ್ತಿರುವ ವಿದ್ಯಾರ್ಥಿಗಳಾಗಿದ್ದಾರೆ ಎಂದು ತಿಳಿದು ಬಂದಿದೆ.


0 Comments

Post a Comment

Post a Comment (0)

Previous Post Next Post