ಬೆಳ್ತಂಗಡಿ: ಪತ್ರಕರ್ತ ಭುವನೇಂದ್ರ ಪುದುವೆಟ್ಟು ಅವರು ಅಲ್ಪಕಾಲದ ಅನಾರೋಗ್ಯದಿಂದ ಇಂದು (ನ.19) ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 42 ವರ್ಷ ವಯಸ್ಸಾಗಿತ್ತು.
ಬೆಳ್ತಂಗಡಿ ಸುದ್ದಿ ಬಿಡುಗಡೆ ಪತ್ರಿಕೆಯ ಮುಖ್ಯ ವರದಿಗಾರರಾಗಿ ಅವರು ಕೆಲಸ ಮಾಡುತ್ತಿದ್ದರು.
ಪುದುವೆಟ್ಟು ಗ್ರಾಮದ ನಾರಾಯಣ ಪೂಜಾರಿ ಮತ್ತು ಮೋಹಿನಿ ದಂಪತಿಗಳ ಪುತ್ರನಾದ ಭುವನೇಂದ್ರ ಅವರಿಗೆ ಎರಡು ದಿನಗಳ ಹಿಂದೆ ತೀವ್ರ ಹೊಟ್ಟೆನೋವು ಮತ್ತು ವಾಂತಿ ಕಾಣಿಸಿಕೊಂಡಿತ್ತು. ಅವರನ್ನು ಮೂಡುಬಿದಿರೆಯ ಆಳ್ವಾಸ್ ಆಆಸ್ಪತ್ರೆಗೆ ದಾಖಲಿಸಲಾಗಿತ್ತು. ಆರೋಗ್ಯ ತಪಾಸಣೆಯ ವೇಳೆ ಪಿತ್ತಕೋಶದಲ್ಲಿ ಕಲ್ಲು ಇರುವುದರಿಂದ ಅಕ್ಯೂಟ್ ಪ್ಯಾಂಕ್ರಿಯಾಸಿಸ್ ಇರುವುದು ಪತ್ತೆಯಾಯ್ತು. ಕೂಡಲೇ ಅವರನ್ನು ಮಂಗಳೂರು ಅತ್ತಾವರದ ಕೆಎಂಸಿ ಆಸ್ಪತ್ರೆಗೆ ಸೇರಿಸಲಾಗಿತ್ತು. ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಇಂದು ಬೆಳಗ್ಗೆ ಕೊನೆಯುಸಿರೆಳೆದರು ಎಂದು ಮೂಲಗಳು ತಿಳಿಸಿವೆ.
ಈ ಮೊದಲು ಅವರು ಕರಾವಳಿ ಅಲೆ, ವೆಬ್ ದುನಿಯಾ, ಕಸ್ತೂರಿ ಟಿವಿ, ವಿಜಯವಾಣಿ ಪತ್ರಿಕೆಗಳಲ್ಲಿ ಕಾರ್ಯನಿರ್ವಹಿಸಿದ್ದರು. ಇತ್ತೀಚೆಗೆ ಬೆಳ್ತಂಗಡಿಯ ಸುದ್ದಿಬಿಡುಗಡೆ ಪತ್ರಿಕೆಗೆ ಮುಖ್ಯ ವರದಿಗಾರರಾಗಿ ಸೇರಿದ್ದರು.
ಅವರು ತಂದೆ-ತಾಯಿ ಹಾಗೂ ಪತ್ನಿ ಸುಜಾತ, ಇಬ್ಬರು ಪುಟ್ಟ ಮಕ್ಕಳು, ಸಹೋದರ ಸಹೋದರಿಯರನ್ನು ಅಗಲಿದ್ದಾರೆ. ಇಂದು ಸಂಜೆಯ ವೇಳೆಗೆ ಪುದುವೆಟ್ಟಿನಲ್ಲಿ ಅವರ ಅಂತ್ಯಕ್ರಿಯೆ ನೆರವೇರಲಿದೆ.
ಅವರ ಅಕಾಲಿಕ ನಿಧನಕ್ಕೆ ಮಾಧ್ಯಮ ವಲಯ ಆಘಾತ ವ್ಯಕ್ತಪಡಿಸಿದ್ದು, ಹಲವರು ಸಂತಾಪ ವ್ಯಕ್ತಪಡಿಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ
إرسال تعليق