ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಪರಿಸರ ಪ್ರೇಮಿ ಪದ್ಮಶ್ರೀ ಪುರಸ್ಕೃತ ತುಳಸಿ ಗೌಡ ನಿಧನ

ಪರಿಸರ ಪ್ರೇಮಿ ಪದ್ಮಶ್ರೀ ಪುರಸ್ಕೃತ ತುಳಸಿ ಗೌಡ ನಿಧನ



ಅಂಕೋಲಾ: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಪರಿಸರ ಪ್ರೇಮಿ ತುಳಸಿ ಗೌಡ ಅವರು ಇಂದು ನಿಧನರಾದರು. ಇತ್ತೀಚೆಗೆ ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದರು.


ಹಾಲಕ್ಕಿ ಸಮುದಾಯದ ಜಾನಪದ ಕಲಾವಿದೆಯಾಗಿರುವ ಪದ್ಮಶ್ರೀ ಸುಕ್ರಿ ಬೊಮ್ಮು ಗೌಡ ಅವರ ಬಳಿಕ ಅದೇ ಸಮುದಾಯದ ಮತ್ತೊಬ್ಬ ಮಹಿಳಾ ಸಾಧಕಿ, ಪರಿಸರ ಪ್ರೇಮಿಯಾಗಿದ್ದವರು ತುಳಸಿ ಗೌಡ.


ಅಂಕೋಲಾ ತಾಲೂಕಿನ ಹೊನ್ನಳ್ಳಿ ಗ್ರಾಮದ ತುಳಸಿ ಗೌಡರ ಸಾಧನೆ ಅಪಾರ. ವೃಕ್ಷಮಾತೆ ಎಂದು ಕರೆಸಿಕೊಂಡಿರುವ ಇವರು ಬೆಳೆಸಿದ ಮರಗಳು ಒಂದೆರಡಲ್ಲ, ಲಕ್ಷಗಟ್ಟಲೆ ಸಂಖ್ಯೆಯಲ್ಲಿವೆ. ಇವರು ಹೊಟ್ಟೆಪಾಡಿಗಾಗಿ ಕಟ್ಟಿಗೆ ಮಾರಾಟ ಮಾಡಿ ಜೀವನ ನಡೆಸುತ್ತಿದ್ದರು.


ಚಪ್ಪಲಿ ಇಲ್ಲದೇ ಬರಿಗಾಲು, ಬುಡಕಟ್ಟು ವೇಷ ಭೂಷಣದಲ್ಲಿ ರಾಷ್ಟ್ರಪತಿ, ಪ್ರಧಾನ ಮಂತ್ರಿ ಸೇರಿದಂತೆ ಗಣ್ಯಾತಿಗಣ್ಯರ ಎದುರು ನಡೆದುಕೊಂಡು ಹೋಗಿ ಪದ್ಮಶ್ರೀ ಪ್ರಶಸ್ತಿ ಪಡೆದು ತಮ್ಮ ಸಹಜ ಸರಳತೆಯಿಂದ ಅಪಾರ ಮೆಚ್ಚುಗೆ ಗಳಿಸಿದ್ದರು.

300ಕ್ಕೂ ಹೆಚ್ಚು ಪ್ರಭೇದದ ಮರಗಳ ಮಾಹಿತಿ ಬಲ್ಲವರಾಗಿದ್ದ ಇವರು ಅರಣ್ಯದ ಎನ್‌ಸೈಕ್ಲೋಪೀಡಿಯಾ ಎಂಬ ಖ್ಯಾತಿ ಪಡೆದಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 


0 تعليقات

إرسال تعليق

Post a Comment (0)

أحدث أقدم