ಮಂಗಳೂರು: ಶ್ವೇತಾ ಜುವೆಲ್ಲರ್ಸ್‌ನ ಮಾಲಕ, ದೈವಜ್ಞ ಬ್ರಾಹ್ಮಣ ಸಮಾಜದ ಕ್ರಿಯಾಶೀಲ ವ್ಯಕ್ತಿತ್ವದ ಎಂ. ಅಶೋಕ್ ಶೇಟ್ (64) ಇಂದು (ಜ.22) ಖಾಸಗಿ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನ ಹೊಂದಿದರು. ಮೃತರು ಪತ್ನಿ, ಮೂವರು ಪುತ್ರಿಯರನ್ನು ಅಗಲಿದ್ದಾರೆ.
ಅಶೋಕ್ ಶೇಟ್ ಪ್ರಸ್ತುತ ಮಂಗಳೂರು ದೈವಜ್ಞ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಹಾಲಿ ಅಧ್ಯಕ್ಷರಾಗಿದ್ದರು. ದೈವಜ್ಞ ಯುವಕ ಮಂಡಳಿಯ ಅಧ್ಯಕ್ಷರಾಗಿ, ಲಯನ್ಸ್ ಕ್ಲಬ್ ಸೇವಾ ಸಂಸ್ಥೆ, ದೈವಜ್ಞ ಬ್ರಾಹ್ಮಣ ಸಂಘ ಮುಂತಾದ ಅನೇಕ ಸಂಘ- ಸಂಸ್ಥೆಗಳಲ್ಲಿ ಪದಾಧಿಕಾರಿಗಳಾಗಿ ಸೇವೆ ಸಲ್ಲಿಸಿದ್ದಾರೆ.
ಮಂಗಳೂರು ದೈವಜ್ಞ ಕ್ರೆಡಿಟ್ ಕೋ- ಅಪರೇಟಿವ್ ಸೊಸೈಟಿಯ ಮುಖ್ಯ ಪ್ರವರ್ತಕರಾಗಿದ್ದ ಎಂ ಅಶೋಕ್ ಶೇಟ್ ರವರು ದೈವಜ್ಞ ಸೌರಭ ಪತ್ರಿಕೆಯ ಸಂಸ್ಥಾಪಕ ಪ್ರಕಾಶಕರಾಗಿದ್ದರು. ಸಾಂಸ್ಕೃತಿಕ, ಧಾರ್ಮಿಕ, ಶೈಕ್ಷಣಿಕ ಚಟುವಟಿಕೆಗಳಲ್ಲಿ ತನ್ನನ್ನು ತೊಡಗಿಸಿಕೊಂಡಿದ್ದ ಅವರು ಸ್ನೇಹಜೀವಿಯಾಗಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ
Post a Comment